ಕಾಡಾನೆ ದಾಳಿಗೆ ಇಬ್ಬರು ಕಾರ್ಮಿಕರು ಬಲಿ…

81
firstsuddi

ಹಾಸನ : ಕಾಡಾನೆ ದಾಳಿಗೆ ಇಬ್ಬರು ಕೂಲಿ ಕಾರ್ಮಿಕರು ಬಲಿಯಾಗಿರುವ ಘಟನೆ ಜಿಲ್ಲೆಯ ಬೇಲೂರು ತಾಲೂಕಿನ ಕಡೆಗರ್ಜೆ ಗ್ರಾಮದ ಕಾಫಿ ತೋಟದಲ್ಲಿ ನಡೆದಿದೆ.

ಮೃತರನ್ನು ಚಿಕ್ಕಯ್ಯ (65) ಮತ್ತು ಈರಯ್ಯ (68) ಎಂದು ಗುರುತಿಸಲಾಗಿದೆ. ಬೆಳಗ್ಗೆ ತೋಟದಲ್ಲಿ ಕೆಲಸ ಮಾಡುವ ವೇಳೆ ಒಂಟಿ ಸಲಗ ದಾಳಿ ಮಾಡಿ ಇಬ್ಬರನ್ನು ಬಲಿ ಪಡೆದಿದೆ.

ಕಾಡಾನೆ ನಿಯಂತ್ರಣಕ್ಕೆ ಅರಣ್ಯ ಇಲಾಖೆ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆ ಗ್ರಾಮಸ್ಥರು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಮೃತರ ಕುಟುಂಬಗಳಿಗೆ ಪರಿಹಾರ ನೀಡುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದರು. ಸ್ಥಳಕ್ಕಾಗಮಿಸಿದ ಅಧಿಕಾರಿಗಳು ಪರಿಸ್ಥಿತಿಯನ್ನು ತಿಳಿಗೊಳಿಸಿದರು. ಮೃತದೇಹಗಳನ್ನು ತಾಲೂಕು ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ.