ವಾಷಿಂಗ್ಟನ್ : ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ಅವರಿಗೆ ಕೋವಿಡ್-19 ಸೋಂಕು ದೃಢಪಟ್ಟಿದೆ. ಈ ಬಗ್ಗೆ ಸ್ವತಃ ಬರಾಕ್ ಒಬಾಮ ಅವರು ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.
ನನಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಕಳೆದ ಎರಡು ದಿನಗಳಿಂದ ಗಂಟಲು ಸಮಸ್ಯೆ ಇತ್ತು. ಆದರೆ ನಾನು ಕ್ಷೇಮವಾಗಿದ್ದೇನೆ. ನಾನು ಮತ್ತು ಮಿಚೆಲ್ ಲಸಿಕೆಯನ್ನು ಹಾಕಿಸಿಕೊಂಡಿದ್ದು ಒಳ್ಳೆಯದಾಯಿತು. ಇದರಿಂದ ಅವರಿಗೆ ಕೊರೊನಾ ಟೆಸ್ಟ್ ಮಾಡಿದಾಗ ನೆಗೆಟಿವ್ ಬಂದಿದೆ. ಕೊರೊನಾ ಪ್ರಕರಣಗಳ ಸಂಖ್ಯೆ ಕಡಿಮೆ ಇದ್ದರೂ ಸಹ ಲಸಿಕೆ ಹಾಕಿಸಿಕೊಳ್ಳುವುದನ್ನು ನೆನಪಿನಲ್ಲಿಟ್ಟುಕೊಳ್ಳಿ ಎಂದು ಒಬಾಮ ಟ್ವೀಟ್ ಮಾಡಿದ್ದಾರೆ.
ಇತ್ತ ಪ್ರಧಾನಿ ಮೋದಿ ಟ್ವೀಟ್ ಮಾಡಿ, ಕೋವಿಡ್ ನಿಂದ ಬರಾಕ್ ಒಬಾಮ ಬೇಗ ಚೇತರಿಸಿಕೊಳ್ಳಬೇಕು ಮತ್ತು ನಿಮ್ಮ ಕುಟುಂಬದ ಯೋಗಕ್ಷೇಮ ಮತ್ತು ಉತ್ತಮ ಆರೋಗ್ಯಕ್ಕಾಗಿ ನಾನು ಶುಭ ಕೋರುತ್ತೇನೆ ಎಂದು ತಿಳಿಸಿದ್ದಾರೆ.










