ನವದೆಹಲಿ : ದೇಶದಲ್ಲಿ ಮಾರ್ಚ್ 16(ಬುಧವಾರ)ರಿಂದ 12 ರಿಂದ 14 ವರ್ಷದ ಮಕ್ಕಳಿಗೆ ಕೋವಿಡ್ ವ್ಯಾಕ್ಸಿನ್ ನೀಡಲು ಕೇಂದ್ರ ಆರೋಗ್ಯ ಇಲಾಖೆ ಮುಂದಾಗಿದೆ.
ಇದಕ್ಕೆ ಸಂಬಂಧಿಸಿದಂತೆ ಕೇಂದ್ರ ಆರೋಗ್ಯ ಸಚಿವ ಡಾ. ಮನ್ಸುಖ್ ಮಾಂಡವಿಯಾ ಅವರು ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದಾರೆ. ಮಕ್ಕಳು ಸುರಕ್ಷಿತವಾಗಿದ್ದರೆ ದೇಶ ಸುರಕ್ಷಿತವಾಗಿರುತ್ತದೆ. ಮಾರ್ಚ್ 16 ರಿಂದ 12, 13 ಮತ್ತು 13, 14 ರ ವಯೋಮಾನದ ಮಕ್ಕಳಿಗೆ ಕೊವಿಡ್ ಲಸಿಕೆಯನ್ನು ಪ್ರಾರಂಭಿಸಲಾಗುವುದು ಎಂದು ತಿಳಿಸಲು ನನಗೆ ಸಂತೋಷವಾಗಿದೆ. ಇದರ ಜೊತೆಗೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಬೂಸ್ಟರ್ ಡೋಸ್ ನೀಡಲಾಗುವುದು ಎಂದು ತಿಳಿಸಿದ್ದಾರೆ.
12ರಿಂದ 14 ವರ್ಷದ ಮಕ್ಕಳಿಗೆ ಕೋವಿಡ್ ವ್ಯಾಕ್ಸಿನ್ ಹಾಕಿಸುವಂತೆ ಪೋಷಕರಲ್ಲಿ ಮನವಿ ಮಾಡಿರುವ ಅವರು, 60 ವರ್ಷಕ್ಕಿಂತ ಮೇಲ್ಪಟ್ಟ ಜನರು ಕಡ್ಡಾಯವಾಗಿ ಲಸಿಕೆಯನ್ನು ಪಡೆಯಬೇಕೆಂದು ಹೇಳಿದ್ದಾರೆ.
बच्चे सुरक्षित तो देश सुरक्षित!
मुझे बताते हुए खुशी है की 16 मार्च से 12 से 13 व 13 से 14 आयुवर्ग के बच्चों का कोविड टीकाकरण शुरू हो रहा है।
साथ ही 60+ आयु के सभी लोग अब प्रिकॉशन डोज लगवा पाएँगे।
मेरा बच्चों के परिजनों व 60+ आयुवर्ग के लोगों से आग्रह है की वैक्सीन जरूर लगवाएँ।
— Dr Mansukh Mandaviya (@mansukhmandviya) March 14, 2022










