ಹಿಜಾಬ್ ವಿವಾದ – ತುರ್ತು ವಿಚಾರಣೆಗೆ ಸುಪ್ರೀಂ ನಿರಾಕರಣೆ…

83
firstsuddi

ನವದೆಹಲಿ : ಹಿಜಾಬ್ ನಿಷೇಧದ ಮೇಲ್ಮನವಿ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂಕೋರ್ಟ್ ನಿರಾಕರಿಸಿದೆ.

ಹಿರಿಯ ವಕೀಲ ಸಂಜಯ್ ಹೆಗಡೆ ಅವರು, ಹಿಜಾಬ್ ನಿಷೇಧದ ವಿಷಯವನ್ನು ತುರ್ತು ವಿಚಾರಣೆಗೆ ಪರಿಗಣಿಸುವಂತೆ ಮನವಿ ಮಾಡಿದರು. ಆದರೆ,ಕೋರ್ಟ್ ತುರ್ತು ವಿಚಾರಣೆ ಸಾಧ್ಯವಿಲ್ಲ. ಹೋಳಿ ರಜೆಯ ಬಳಿಕ ವಿಚಾರಣೆಗೆ ವಿಷಯ ಪಟ್ಟಿ ಮಾಡಲಾಗುವುದು ಎಂದು ತಿಳಿಸಿದೆ.

ಈ ವೇಳೆ ಮಧ್ಯ ಪ್ರವೇಶ ಮಾಡಿದ ವಕೀಲ ಸಂಜಯ್ ಹೆಗಡೆ, ಸೋಮವಾರ ವಿಚಾರಣೆ ನಡೆಸುವಂತೆ ಮನವಿ ಮಾಡಿದರು. ಆದರೆ ಸಿಜೆಐ ಎನ್.ವಿ. ರಮಣ, ಅವರ ಮನವಿಯನ್ನು ತಿರಸ್ಕರಿಸಿದ್ದಾರೆ.

ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ನಿನ್ನೆ ತೀರ್ಪು ನೀಡಿತ್ತು. ಬಳಿಕ ಪ್ರಕರಣ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು.