ಕಾಡುಹಂದಿಗೆ ಕಾರು ಡಿಕ್ಕಿ – ಮೂವರು ದುರ್ಮರಣ…

94
firstsuddi

ಚಿತ್ರದುರ್ಗ : ಕಾಡುಹಂದಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಐಮಂಗಲ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ. ಕಾರಿನಲ್ಲಿದ್ದ ಮತ್ತೆ ಮೂವರಿಗೆ ಗಂಭೀರವಾದ ಗಾಯಾಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಅಪಘಾತಕ್ಕೀಡಾದ ಕಾರಿನಲ್ಲಿ ಇಬ್ಬರು ಮಕ್ಕಳು ಸೇರಿದಂತೆ ಒಟ್ಟು ಆರು ಮಂದಿ ಪ್ರಯಾಣ ಬೆಳೆಸುತ್ತಿದ್ದರು. ಇವರೆಲ್ಲರು ಬೆಂಗಳೂರಿನಿಂದ ದಾವಣಗೆರೆ ನಗರದಲ್ಲಿ ನಡೆಯುತ್ತಿದ್ದ ದುರ್ಗಾದೇವಿ ಜಾತ್ರೆಗಾಗಿ ತೆರಳುತ್ತಿದ್ದರು. ಈ ವೇಳೆ ರಸ್ತೆಯಲ್ಲಿ ದಿಢೀರ್ ಆಗಿ ಹಂದಿ ಅಡ್ಡ ಬಂದ ಪರಿಣಾಮ ಕಾರು ಅದಕ್ಕೆ ಡಿಕ್ಕಿ ಹೊಡೆದಿದ್ದು, ಬಳಿಕ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ. ಐಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.