ಪಂಜಾಬ್ ಸಿಎಂ ಆಗಿ ಭಗವಂತ್ ಮಾನ್ ಪ್ರಮಾಣ ವಚನ ಸ್ವೀಕಾರ…

73
firstsuddi

ಚಂಡೀಗಢ : ಪಂಜಾಬ್ ಮುಖ್ಯಮಂತ್ರಿಯಾಗಿ ಆಮ್ ಆದ್ಮಿ ಪಕ್ಷದ ನಾಯಕ ಭಗವಂತ್ ಮಾನ್ ಅವರು ಪ್ರಮಾಣ ವಚನ ಸ್ವೀಕರಿಸಿದರು.

ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಅವರ ಗ್ರಾಮವಾದ ಖಟ್ಕರ್ ಕಲಾನ್ ನಲ್ಲಿ ಪ್ರಮಾಣ ವಚನದ ಅದ್ಧೂರಿ ಸಮಾರಂಭ ಆಯೋಜಿಸಲಾಗಿತ್ತು. ಸಮಾರಂಭದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಆಮ್ ಆದ್ಮಿ ಪಕ್ಷದ ಇತರ ಹಿರಿಯ ನಾಯಕರು ಪಾಲ್ಗೊಂಡಿದ್ದರು. ಸಮಾರಂಭಕ್ಕೆ ಎಲ್ಲರು ಹಳದಿ ಪೇಟಗಳನ್ನು ಧರಿಸಿ ಬಂದಿದ್ದರು.

ಈ ವೇಳೆ ಮಾತನಾಡಿದ ಭಗವಂತ್ ಮಾನ್, ನಾನು ಇಂದು ಯಾರನ್ನೂ ತಿರಸ್ಕರಿಸಲು ಬಂದಿಲ್ಲ. ನಾನು ಪಂಜಾಬ್ ನಲ್ಲಿ ಪ್ರತಿಯೊಬ್ಬರಿಗೂ ಮುಖ್ಯಮಂತ್ರಿಯಾಗಿದ್ದೇನೆ. ನಮ್ಮ ಪಕ್ಷಕ್ಕೆ ಮತ ಹಾಕದವರಿಗೂ ನಾನು ಮುಖ್ಯಮಂತ್ರಿ. ಅಹಂಕಾರಕ್ಕೆ ಒಳಗಾಗಬೇಡಿ ಎಂದು ನಾನು ನಿಮ್ಮೆಲ್ಲರಲ್ಲಿ ಮನವಿ ಮಾಡುತ್ತೇನೆ. ನಮಗೆ ಮತ ಹಾಕದವರನ್ನೂ ನಾವು ಗೌರವಿಸಬೇಕು ಎಂದು ಪಕ್ಷದ ಶಾಸಕರಿಗೆ ಕರೆ ನೀಡಿದರು.