ರಾಜ್ಯ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರಾಗಿ ಕೇವಲ ಮುಸ್ಲಿಂ ಸಮುದಾಯದವರ ನೇಮಕ ಪ್ರಶ್ನಿಸಿ ಅರ್ಜಿ ಸಲ್ಲಿಕೆ – ಸುಪ್ರೀಂ ನೋಟಿಸ್ ಜಾರಿ…

95
firstsuddi

ನವದೆಹಲಿ : ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರ ನೇಮಕ ಮಾಡಿಕೊಳ್ಳುವಾಗ ಕೇವಲ ಮುಸ್ಲಿಂ ಸಮುದಾಯದ ವ್ಯಕ್ತಿಯನ್ನು ನೇಮಕ ಮಾಡಲಾಗುತ್ತಿದೆ ಎಂದು ಪ್ರಶ್ನಿಸಿ, ಸಲ್ಲಿಸಲಾದ ಅರ್ಜಿಗೆ ಸುಪ್ರೀಂಕೋರ್ಟ್ ನೋಟಿಸ್ ಜಾರಿ ಮಾಡಿದೆ.

ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರು ಮೊದಲಿನಿಂದಲೂ ಇಲ್ಲಿಯವರೆಗೆ ಇತರ ಅಲ್ಪಸಂಖ್ಯಾತ ಸಮುದಾಯಗಳಿಗೆ ಯಾವುದೇ ಸಮಾನ ಭಾಗವಹಿಸುವಿಕೆ ಮತ್ತು ಪ್ರಾತಿನಿಧ್ಯವನ್ನು ನೀಡದೆ ಕೇವಲ ಮುಸ್ಲಿಂ ಸಮುದಾಯದ ವ್ಯಕ್ತಿಯನ್ನು ನೇಮಕ ಮಾಡಲಾಗುತ್ತಿದೆ ಎಂದು ಆರೋಪಿಸಿ ಅನಿಲ್ ಆ್ಯಂಟನಿ ಎಂಬುವವರು ಸುಪ್ರೀಂಕೋರ್ಟ್ ಗೆ ಅರ್ಜಿಯನ್ನು ಸಲ್ಲಿಸಿದ್ದರು.

ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ವಿನೀತ್ ಸರನ್ ಮತ್ತು ಅನಿರುದ್ಧ ಬೋಸ್ ಅವರ ಪೀಠವು ಈ ಕುರಿತಂತೆ ಅಲ್ಪಸಂಖ್ಯಾತ ಆಯೋಗಕ್ಕೆ ನೋಟಿಸ್ ಜಾರಿ ಮಾಡಿದೆ.