ನವದೆಹಲಿ : ಇಂದು ದೇಶಾದ್ಯಂತ ಹೋಳಿ ಹಬ್ಬದ ಸಂಭ್ರಮ ಮನೆ ಮಾಡಿದ್ದು, ಜನತೆಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಹೋಳಿ ಹಬ್ಬದ ಶುಭಾಶಯ ತಿಳಿಸಿದ್ದಾರೆ.
ನಿಮ್ಮೆಲ್ಲರಿಗೂ ಹೋಳಿ ಹಬ್ಬದ ಶುಭಾಶಯಗಳು. ಪರಸ್ಪರ ಪ್ರೀತಿ, ಭ್ರಾತೃತ್ವ ಮತ್ತು ವಿಶ್ವಾಸ ಎಲ್ಲರ ಬಾಳಿನಲ್ಲೂ ಬೆಳಗಬೇಕು. ಪ್ರತಿ ಬಣ್ಣವೂ ಬದುಕಿಗೆ ಸಂತಸ ತರಲಿ ಎಂದು ಪ್ರಧಾನಿ ಟ್ವೀಟ್ ಮಾಡಿದ್ದಾರೆ.
ಹೋಳಿ ಹಬ್ಬದ ಈ ಶುಭ ಸಂದರ್ಭದಲ್ಲಿ ದೇಶದ ಎಲ್ಲಾ ಜನತೆಗೆ ಹೃತ್ಪೂರ್ವಕ ಶುಭಾಶಯಗಳನ್ನು ಕೋರುತ್ತೇನೆ.ಬಣ್ಣಗಳ ಹಬ್ಬವಾದ ಹೋಳಿಯು ಸಮುದಾಯದ ಸೌಹಾರ್ದತೆ ಮತ್ತು ಸಾಮರಸ್ಯದ ಜೀವಂತ ಉದಾಹರಣೆಯಾಗಿದೆ. ಈ ಹಬ್ಬವು ಎಲ್ಲ ದೇಶವಾಸಿಗಳ ಜೀವನದಲ್ಲಿ ಸಂತೋಷ, ಉತ್ಸಾಹ ಮತ್ತು ಹೊಸ ಶಕ್ತಿಯನ್ನು ತುಂಬಲಿ’ ಎಂದು ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಟ್ವೀಟ್ ಮೂಲಕ ಶುಭ ಕೋರಿದ್ದಾರೆ.










