‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ನಿರ್ದೇಶಕನಿಗೆ ‘ವೈ’ ಕೆಟಗರಿ ಭದ್ರತೆ…

73
firstsuddi

ಮುಂಬೈ : ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ಎಲ್ಲೆಡೆ ಸದ್ದು ಮಾಡುತ್ತಿದೆ. ಇದರ ಜೊತೆಗೆ ವಿವಾದ ಕೂಡ ಸೃಷ್ಟಿಯಾಗಿದೆ. ಈ ಸಿನಿಮಾ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಅವರಿಗೆ ಭಾರತದ ಸರಕಾರ ‘ವೈ’ ಕೆಟಗರಿ ಭದ್ರತೆ ನೀಡಲಾಗುತ್ತಿದೆ ಎಂದು ವರದಿ ಆಗಿದೆ.

ವಿವೇಕ್ ಅಗ್ನಿಹೋತ್ರಿ ಅವರ ವಿರುದ್ಧ ಕೆಲವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕಾಶ್ಮೀರಿ ಪಂಡಿತರ ಹತ್ಯೆ ಮತ್ತು ವಲಸೆ ಆಧರಿಸಿ ಈ ಸಿನಿಮಾ ತಯಾರಾಗಿದೆ. ಇಂತಹ ಚಿತ್ರಗಳಿಂದ ಕೋಮಗಲಭೆ ಆಗುವ ಸಾಧ್ಯತೆ ಇದೆ. ಅಲ್ಲದೇ, ಜನರ ಭಾವನೆಗಳನ್ನು ಕೆರಳಿಸುವ ಪ್ರಯತ್ನವನ್ನು ಈ ಸಿನಿಮಾ ಮಾಡುತ್ತಿದೆ ಎಂದು ಹಲವರು ಆರೋಪಿಸಿದ್ದಾರೆ.

ಅಲ್ಲದೇ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಅವರಿಗೆ ಜೀವ ಬೆದರಿಕೆ ಕರೆಗಳು ಬರುತ್ತಿರುವ ಹಿನ್ನೆಲೆಯಲ್ಲಿ ಅವರಿಗೆ ‘ವೈ’ ಶ್ರೇಣಿಯ ಸಿಆರ್‌ಪಿಎಫ್ ಭದ್ರತೆಯನ್ನು ನೀಡಲು ತೀರ್ಮಾನಿಸಿದೆ ಎಂದು ಹೇಳಲಾಗುತ್ತಿದೆ.