ನೂತನ ಸಚಿವರಾಗಿ ಆಮ್ ಆದ್ಮಿ ಪಕ್ಷದ 10 ಶಾಸಕರು ಪ್ರಮಾಣ ವಚನ ಸ್ವೀಕಾರ…

79
firstsuddi

ಚಂಡೀಗಢ : ಪಂಜಾಬ್ ನ ನೂತನ ಮುಖ್ಯಮಂತ್ರಿಯಾಗಿ ಭಗವಂತ್ ಮಾನ್ ಪ್ರಮಾಣ ವಚನ ಸ್ವೀಕರಿಸಿದ ಎರಡು ದಿನಗಳ ಬಳಿಕ ಕ್ಯಾಬಿನೆಟ್ ರಚನೆಯಾಗಿದ್ದು, ಆಮ್ ಆದ್ಮಿ ಪಕ್ಷದ 10 ಶಾಸಕರು ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.

ಆಪ್ ಪಕ್ಷ ಶಾಸಕರಾದ ಹರ್ಪಾಲ್ ಸಿಂಗ್ ಚೀಮಾ, ಡಾ.ಬಲ್ಜಿತ್ ಕೌರ್, ಹರ್ಭಜನ್ ಸಿಂಗ್ ಇಟಿಒ, ಡಾ.ವಿಜಯ್ ಸಿಂಗ್ಲಾ, ಲಾಲ್ ಚಂದ್ ಕತರುಚಕ್, ಗುರ್ಮೀತ್ ಸಿಂಗ್ ಮೀತ್ ಹಯೆರ್, ಧಲಿವಾಲ್, ಲಾಲ್ಜಿತ್ ಸಿಂಗ್ ಭುಲ್ಲರ್, ಬ್ರಹ್ಮ್ ಶಂಕರ್ ಜಿಂಪಾ ಮತ್ತು ಹರ್ಜೋತ್ ಸಿಂಗ್ ಬೈನ್ಸ್ ಪ್ರಮಾಣವಚನ ಸ್ವೀಕರಿಸಿದ್ದಾರೆ. ಮಹಿಳೆ ಸೇರಿದಂತೆ ನಾಲ್ವರು ಜಾಟ್, ನಾಲ್ವರು ಎಸ್ಸಿಗಳು ಮತ್ತು ಇಬ್ಬರು ಹಿಂದೂಗಳು ಕ್ಯಾಬಿನೆಟ್ ನಲ್ಲಿ ಒಳಗೊಂಡಿದ್ದಾರೆ.

ಚಂಡೀಗಢದ ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆದಿದ್ದು, ಪಂಜಾಬ್ ರಾಜ್ಯಪಾಲ ಭನ್ವಾರಿಲಾಲ್ ಪುರೋಹಿತ್ ನೂತನ ಸಚಿವರಿಗೆ ಪ್ರಮಾಣ ವಚನ ಬೋಧಿಸಿದರು.