ಬೆಂಗಳೂರು:ಬಿಬಿಎಂಪಿ ಕಸದ ಲಾರಿಗೆ ಸಿಲುಕಿ ಬಾಲಕಿ ಸಾವು…

67

ಬೆಂಗಳೂರು: ಬಿಬಿಎಂಪಿ ಕಸದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಶಾಲಾ ಬಾಲಕಿಯೊಬ್ಬಳು
ಸಾವನ್ನಪ್ಪಿರುವ ಘಟನೆ ಹೆಬ್ಬಾಳದ ಫ್ಲೈ ಓವರ್ ಬಳಿ ನಡೆದಿದೆ.

9ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ಅಕ್ಷಯಾ(13) ಮೃತ ವಿದ್ಯಾರ್ಥಿನಿ.‌ ಘಟನೆಯಲ್ಲಿ ಸುಮಾರು 6ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಘಟನೆ ಹೇಗಾಯಿತು:
ಹೆಬ್ಬಾಳ ಪೊಲೀಸ್ ಠಾಣೆ‌ ಮುಂಭಾಗದಲ್ಲಿರುವ ಅಂಡರ್ ಪಾಸ್​​ನಲ್ಲಿ ನೀರು ತುಂಬಿದ್ದ ಪರಿಣಾಮ ಪಾದಚಾರಿಗಳು ಡಿವೈಡರ್ ದಾಟಿ ರಸ್ತೆ ದಾಟುತ್ತಿದ್ದರು. ಮಧ್ಯಾಹ್ನ 12:30ರ ವೇಳೆಗೆ ಬಸ್ ಇಳಿದ ಬಾಲಕಿ ಅಂಡರ್ ಪಾಸ್‍ನಲ್ಲಿ ನೀರು ತುಂಬಿರುವುದನ್ನು ನೋಡಿ, ಡಿವೈಡರ್ ದಾಟಿ ರಸ್ತೆ ಕ್ರಾಸ್ ಮಾಡುತ್ತಿದ್ದಳು. ಈ ವೇಳೆ ಕಾರು ಮತ್ತು ಬೈಕ್ ಸಡನ್ ಆಗಿ ಬ್ರೇಕ್ ಹಾಕಿದ್ದಾರೆ. ಆದರೆ ಹಿಂದಿನಿಂದ ವೇಗವಾಗಿ ಬರುತ್ತಿದ್ದ ಬಿಬಿಎಂಪಿ ಕಸದ ಲಾರಿ, ಕಾರು, ಬೈಕ್‍ಗೆ ಡಿಕ್ಕಿಯಾಗಿ ಬಾಲಕಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ.

ಅಪಘಾತದಲ್ಲಿ ಬೈಕ್ ಸವಾರನ ಕಾಲು ಮುರಿದಿದೆ. ಲಾರಿ ಡ್ರೈವರ್ ಸದ್ಯ ಪೊಲೀಸರ ವಶದಲ್ಲಿದ್ದು, ಆರ್‌ಟಿ ನಗರ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.