ನವದೆಹಲಿ : ಸತತ ಎರಡನೇ ದಿನವೂ ಪೆಟ್ರೋಲ್, ಡೀಸೆಲ್ ಪ್ರತಿ ಲೀಟರ್ ಗೆ 80 ಪೈಸೆ ಹೆಚ್ಚಳ ಆಗಿದ್ದು, ವಾಹನ ಸವಾರರಿಗೆ ಬೆಲೆ ಏರಿಕೆ ಬಿಸಿ ತಟ್ಟಿದೆ.
ಬೆಂಗಳೂರಿನಲ್ಲಿ ಪೆಟ್ರೋಲ್ ಲೀಟರ್ ಗೆ 102.26 ರೂಪಾಯಿ ಇದ್ದರೆ, ಡೀಸೆಲ್ 86.58 ರೂಪಾಯಿ ಇದೆ. ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 111.67 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 95.85 ರೂಪಾಯಿ ಇದೆ. ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 102.91 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 92.95 ರೂಪಾಯಿ ಇದೆ. ಕೋಲ್ಕತ್ತಾದಲ್ಲಿ ಪೆಟ್ರೋಲ್ 106.34 ಮತ್ತು ಡೀಸೆಲ್ 91.42 ರೂಪಾಯಿಗೆ ಏರಿಕೆಯಾಗಿದೆ.
ನವೆಂಬರ್ 2ರಿಂದ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗಿರಲಿಲ್ಲ. ಇದೀಗ ತೈಲ ಮಾರುಕಟ್ಟೆ ಕಂಪನಿಗಳು ಪೆಟ್ರೋಲಿಯಂ ಉತ್ಪನ್ನಗಳ ಹೆಚ್ಚಳವನ್ನು ನಿನ್ನೆಯಿಂದ ಏರಿಕೆ ಮಾಡಲು ಪ್ರಾರಂಭಿಸಿವೆ. ರಷ್ಯಾ, ಉಕ್ರೇನ್ ನಡುವಿನ ಯುದ್ಧದಿಂದಾಗಿ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ದರ ಬಾರಿ ಏರಿಕೆ ಕಂಡಿದ್ದು ಈಗ ಭಾರತದ ಮೇಲೂ ಪರಿಣಾಮ ಬೀರಿದೆ.










