ಕಾಟನ್ ಮಿಲ್‍ನಲ್ಲಿ ಅಗ್ನಿ ದುರಂತ – ಕೋಟ್ಯಂತರ ಮೌಲ್ಯದ ಹತ್ತಿ ಬೆಂಕಿಗಾಹುತಿ…

59
firstsuddi

ಧಾರವಾಡ : ಜಿಲ್ಲೆಯ ಹೊರವಲಯದ ಬೇಲೂರು ಕೈಗಾರಿಕಾ ಪ್ರದೇಶದ ರಾಜೇಶ್ ಕಾಟನ್ ಜಿನ್ನಿಂಗ್ ಮತ್ತು ಪ್ರೆಸಿಂಗ್ ಮಿಲ್ ನಲ್ಲಿ ತಡರಾತ್ರಿ ಅಗ್ನಿ ಅವಘಡ ಸಂಭವಿಸಿ ಕೋಟ್ಯಂತರ ರೂ. ಮೌಲ್ಯದ ಹತ್ತಿ ಹಾಗೂ ಹಿಂಡಿ ಬೆಂಕಿಗಾಹುತಿಯಾಗಿದೆ.

ವಿಷಯ ತಿಳಿದು ಸ್ಥಳಕ್ಕೆ ಧಾರವಾಡದ ಅಗ್ನಿ ಶಾಮಕ ತಂಡ ಭೇಟಿ ನೀಡಿ ಬೆಂಕಿ ನಂದಿಸುವ ಕೆಲಸ ಮಾಡಿದೆ. ಬೆಂಕಿ ಹೇಗೆ ಹೊತ್ತಿಕೊಂಡಿತು ಎಂಬ ಬಗ್ಗೆ ಮಾಹಿತಿ ತಿಳಿದು ಬಂದಿಲ್ಲ. ಗರಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.