ನವದೆಹಲಿ : ಭಾರತವು ಸರಕು ರಫ್ತಿನಿಂದ 400 ಬಿಲಿಯನ್ ಡಾಲರ್ ಗುರಿಯನ್ನು ಸಾಧಿಸಿದ್ದು, ಇದು ‘ಆತ್ಮನಿರ್ಭರ ಭಾರತ’ ಪ್ರಯಾಣದಲ್ಲಿನ ಪ್ರಮುಖ ಮೈಲಿಗಲ್ಲು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಬಣ್ಣಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಭಾರತವು 400 ಬಿಲಿಯನ್ ಸರಕು ರಫ್ತುಗಳ ಮಹತ್ವಾಕಾಂಕ್ಷೆಯ ಗುರಿಯನ್ನು ಈಗಾಗಲೇ ತಲುಪಿದ್ದು, ಮೊದಲ ಬಾರಿಗೆ ಈ ಗುರಿಯನ್ನು ಸಾಧಿಸಿದೆ. ಈ ಯಶಸ್ಸಿಗಾಗಿ ನಮ್ಮ ರೈತರು, ನೇಕಾರರು, ಎಂಎಸ್ ಎಂಇಗಳು, ಉತ್ಪಾದಕರು, ರಫ್ತುದಾರರನ್ನು ಅಭಿನಂದಿಸುತ್ತೇನೆ. ಇದು ನಮ್ಮ ಆತ್ಮನಿರ್ಭರ ಭಾರತ್ ಪಯಣದಲ್ಲಿನ ಪ್ರಮುಖ ಮೈಲಿಗಲ್ಲು ಎಂದಿದ್ದಾರೆ.
India set an ambitious target of $400 Billion of goods exports & achieves this target for the first time ever. I congratulate our farmers, weavers, MSMEs, manufacturers, exporters for this success.
This is a key milestone in our Aatmanirbhar Bharat journey. #LocalGoesGlobal pic.twitter.com/zZIQgJuNeQ
— Narendra Modi (@narendramodi) March 23, 2022










