ಟ್ರಾನ್ಸ್ ಫಾರ್ಮರ್ ಸ್ಫೋಟ ; ಚಿಕಿತ್ಸೆ ಫಲಕಾರಿಯಾಗದೇ ತಂದೆ-ಮಗಳು ಸಾವು…

66
firstsuddi

ಬೆಂಗಳೂರು : ಟ್ರಾನ್ಸ್ ಫಾರ್ಮರ್ ಸ್ಫೋಟಗೊಂಡು ಗಂಭೀರವಾಗಿ ಗಾಯಗೊಂಡಿದ್ದ ತಂದೆ-ಮಗಳು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.

ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯ ಮಂಗನಹಳ್ಳಿ ಬಳಿ ನಿನ್ನೆ ಘಟನೆ ನಡೆದಿತ್ತು. ಮದುವೆಗೆ ಕಲ್ಯಾಣ ಮಂಟಪವೊಂದನ್ನು ಬುಕ್ ಮಾಡಿಕೊಂಡು ಅಪ್ಪ-ಮಗಳು ಸ್ಕೂಟಿಯಲ್ಲಿ ವಾಪಸ್ ಮನೆಗೆ ಬರುತ್ತಿದ್ದಾಗ, ರಸ್ತೆ ಪಕ್ಕದಲ್ಲಿದ್ದ ಟ್ರಾನ್ಸ್ ಫಾರ್ಮರ್ ಇದ್ದಕ್ಕಿದ್ದಂತೆ ಸ್ಫೋಟಗೊಂಡಿತ್ತು. ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡ ತಂದೆ ಶಿವರಾಜ್, ಮಗಳು ಚೈತನ್ಯರನ್ನು ಸ್ಥಳೀಯರು ಕೂಡಲೇ ವಿಕ್ಟೋರಿಯಾ ಆಸ್ಪತ್ರೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಿಸದೇ ನಿನ್ನೆ ಶಿವರಾಜ್ ಮೃತಪಟ್ಟರೆ, ಇಂದು ಮುಂಜಾನೆ 2.15ರ ಸುಮಾರಿಗೆ ಚೈತನ್ಯ ಕೂಡ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.

ಘಟನೆ ಸಂಬಂಧ ನಿನ್ನೆ ಶಿವರಾಜ್ ಸಂಬಂಧಿಕರು ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಇದೀಗ ಬೆಸ್ಕಾಂ ಅಧಿಕಾರಿಗಳ ವಿರುದ್ಧ ಎಫ್ ಐಆರ್ ದಾಖಲಾಗಿದೆ.