ನವದೆಹಲಿ : ಹಿಜಾಬ್ ಪ್ರಕರಣದ ತುರ್ತು ವಿಚಾರಣೆಗೆ ಸುಪ್ರೀಂಕೋರ್ಟ್ ನಿರಾಕರಿಸಿದೆ.
ಕರ್ನಾಟಕ ಹೈಕೋರ್ಟ್ ಹಿಜಾಬ್ ತೀರ್ಪು ಪ್ರಶ್ನಿಸಿ ಅರ್ಜಿದಾರ ವಿದ್ಯಾರ್ಥಿನಿ ಪರ ದೇವದತ್ತ ಕಾಮತ್ ಅವರು, ಮಾ.28ರಿಂದ ಎಸ್ ಎಸ್ಎಲ್ಸಿ ಪರೀಕ್ಷೆ ಆರಂಭ ಹಿನ್ನೆಲೆಯಲ್ಲಿ ಹಿಜಾಬ್ ಧರಿಸಿ ಪರೀಕ್ಷೆಗೆ ಹಾಜರಾಗಲು ಅವಕಾಶ ಕೊಡುವುದಿಲ್ಲ. ವಿದ್ಯಾರ್ಥಿನಿಯರು ಶೈಕ್ಷಣಿಕ ವರ್ಷ ಕಳೆದುಕೊಳ್ಳಬೇಕಾಗುತ್ತದೆ. ಹೀಗಾಗಿ ತುರ್ತಾಗಿ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಬೇಕು ಎಂದು ಮನವಿ ಮಾಡಿದ್ದರು. ಈ ಮನವಿಯನ್ನು ತಿರಸ್ಕರಿಸಿದ ಸಿಜೆಐ ಎನ್.ವಿ.ರಮಣ, ಹಿಜಾಬ್ ಗೂ ಪರೀಕ್ಷೆಗೂ ಯಾವುದೇ ಸಂಬಂಧವಿಲ್ಲ. ವಿಷಯಗಳನ್ನು ಅತಿರಂಜಿತಗೊಳಿಸಬೇಡಿ ಎಂದು ಹೇಳಿದ್ದಾರೆ.
ಈ ಹಿಂದೆ ಕೂಡ ತುರ್ತು ವಿಚಾರಣೆಗೆ ಮನವಿ ಮಾಡಿದ್ದಾಗ ಸುಪ್ರೀಂ ಅದನ್ನು ಹೋಳಿ ಹಬ್ಬದ ನಂತರ ವಿಚಾರಣೆ ನಡೆಸುವುದಾಗಿ ಹೇಳಿ, ವಿಚಾರಣೆ ಮುಂದೂಡಿತ್ತು.










