ಪಾವಗಡ ಬಸ್ ದುರಂತ ಪ್ರಕರಣ ; ಚಿಕಿತ್ಸೆ ಫಲಿಸದೇ ವಿದ್ಯಾರ್ಥಿ ಸಾವು…

83
firstsuddi

ತುಮಕೂರು : ಜಿಲ್ಲೆಯ ಪಾವಗಡ ತಾಲೂಕಿನ ಪಳವಳ್ಳಿ ಕಟ್ಟೆ ಬಳಿ ನಡೆದ ಖಾಸಗಿ ಬಸ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬುಡ್ಡಾರೆಡ್ಡಿ ಗ್ರಾಮದ ಮಹೇಂದ್ರ ಚಿಕಿತ್ಸೆ ಫಲಿಸದೇ ಸಾವನಪ್ಪಿದ್ದಾನೆ. ಮಹೇಂದ್ರ ಸಾವಿನ ಮೂಲಕ ಮೃತರ ಸಾವಿನ ಸಂಖ್ಯೆ 7 ಕ್ಕೆ ಏರಿಕೆಯಾಗಿದೆ.

ಅಪಘಾತದಲ್ಲಿ ಬೆನ್ನು ಮೂಳೆಗೆ ಏಟು ಬಿದ್ದಿ ಪರಿಣಾಮ ಮಹೇಂದ್ರ ಅವರನ್ನು ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ವಿಕ್ಟೋರಿಯ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಇಂದು ಬೆಳಗ್ಗೆ ಸಾವನಪ್ಪಿದ್ದಾನೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಮಾರ್ಚ್ 21 ರಂದು ಜಿಲ್ಲೆಯ ಪಾವಗಡ ಸಮೀಪ ಖಾಸಗಿ ಬಸ್ ಅಪಘಾತ ಸಂಭವಿಸಿತ್ತು. ದುರಂತದಿಂದ ಈವರೆಗೆ ಒಟ್ಟು 7 ಜನ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದರು. ಗಾಯಾಳುಗಳನ್ನು ತುಮಕೂರು ಮತ್ತು ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.