ಉತ್ತರ ಪ್ರದೇಶದಲ್ಲಿ ಉಚಿತ ಪಡಿತರ ಯೋಜನೆ ವಿಸ್ತರಣೆ – ಯೋಗಿ ಆದಿತ್ಯನಾಥ್ ಮಹತ್ವದ ನಿರ್ಧಾರ…

74
firstsuddi

ಲಖನೌ : ಉತ್ತರ ಪ್ರದೇಶದಲ್ಲಿ ಮುಂದಿನ ಮೂರು ತಿಂಗಳು ಉಚಿತ ಪಡಿತರ ಯೋಜನೆಯನ್ನು ವಿಸ್ತರಿಸಲಾಗುವುದು ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಘೋಷಿಸಿದ್ದಾರೆ.

ಲಖನೌದಲ್ಲಿರುವ ಲೋಕಭವನದಲ್ಲಿ ಇಂದು ಮೊದಲ ಸಂಪುಟ ಸಭೆ ನಡೆಸಿದ ಅವರು, ಮುಂದಿನ ಜೂನ್ ವರೆಗೆ ಉಚಿತ ಪಡಿತರ ಯೋಜನೆಯನ್ನು ಮುಂದುವರಿಸಲಾಗುತ್ತದೆ. ಇದರಿಂದಾಗಿ ರಾಜ್ಯದ 15 ಕೋಟಿ ಜನರಿಗೆ ಪ್ರಯೋಜನವಾಗಲಿದೆ ಎಂದಿದ್ದಾರೆ. ಸತತವಾಗಿ ಎರಡನೇ ಬಾರಿಗೆ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಕೆಲವೇ ಗಂಟೆಗಳ ನಂತರ ಸಿಎಂ ಯೋಗಿ ಆದಿತ್ಯನಾಥ್ ಮಹತ್ವದ ನಿರ್ಧಾರ ತೆಗೆದುಕೊಂಡಿದ್ದಾರೆ.