ನವದೆಹಲಿ : ಕೇಂದ್ರ ಸರ್ಕಾರವು ಇಂದು ಕೇಂದ್ರ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆವನ್ನು ಶೇಕಡಾ 3ರಷ್ಟು ಹೆಚ್ಚಿಸಿದೆ. ಇದು ಜನವರಿ ತಿಂಗಳಿಂದಲೇ ಪೂರ್ವಾನ್ವಯವಾಗಿದೆ. ತುಟ್ಟಿ ಭತ್ಯೆ ಏರಿಕೆಯಿಂದ ಕೇಂದ್ರ ಸರ್ಕಾರದ ಉದ್ಯೋಗಿಗಳಿಗೆ ಹಣಕಾಸು ನಿರ್ವಹಣೆ, ದೈನಂದಿನ ಖರ್ಚು- ವೆಚ್ಚ ನಿರ್ವಹಣೆಗೆ ಸಹಾಯಕವಾಗುತ್ತದೆ.
ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಡಿಎ ಮತ್ತು ಡಿಆರ್ ನಲ್ಲಿ ಮತ್ತೆ ಶೇಕಡಾ 3ರಷ್ಟು ಹೆಚ್ಚಳವನ್ನು ಘೋಷಿಸಿದ ನಂತರ ತುಟ್ಟಿಭತ್ಯೆ ಮೂಲ ವೇತನದ ಶೇ 34ಕ್ಕೆ ಏರಿದೆ. ಈ ನಿರ್ಧಾರದಿಂದ 47.68 ಲಕ್ಷ ಸರ್ಕಾರಿ ನೌಕರರು ಮತ್ತು 68.62 ಲಕ್ಷ ಪಿಂಚಣಿದಾರರಿಗೆ ಪ್ರಯೋಜನವಾಗಲಿದೆ.
ಕೇಂದ್ರವು ಪ್ರತಿ ವರ್ಷ ಎರಡು ಬಾರಿ ಡಿಎ ಪರಿಷ್ಕರಿಸುತ್ತದೆ – ಜನವರಿ ಮತ್ತು ಜುಲೈ ತಿಂಗಳಲ್ಲಿ. ಉದ್ಯೋಗಿಗಳು ನಗರ ವಲಯ, ಅರೆ-ನಗರ ವಲಯ ಅಥವಾ ಗ್ರಾಮೀಣ ವಲಯದಲ್ಲಿ ಕೆಲಸ ಮಾಡುತ್ತಾರೆಯೇ ಎಂಬುದರ ಆಧಾರದ ಮೇಲೆ ತುಟ್ಟಿಭತ್ಯೆಯು ಉದ್ಯೋಗಿಯಿಂದ ಉದ್ಯೋಗಿಗೆ ಬದಲಾಗುತ್ತದೆ.










