ಉದ್ಯಮಿ ಕೊಲೆ ಪ್ರಕರಣ – ಬನ್ನಂಜೆ ರಾಜಾ ಸೇರಿ 9 ಆರೋಪಿಗಳು ದೋಷಿ ಎಂದು ತೀರ್ಪು ನೀಡಿದ ಕೋರ್ಟ್.

69
firstsuddi

ಬೆಳಗಾವಿ : ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಮೂಲದ ಅದಿರು ಉದ್ಯಮಿ ಆರ್.ಎನ್.ನಾಯಕ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದ ಕೋಕಾ ನ್ಯಾಯಾಲಯ ಭೂಗತ ಪಾತಕಿ ಬನ್ನಂಜೆ ರಾಜಾ ಸೇರಿ 9 ಜನ ಆರೋಪಿಗಳನ್ನು ‘ದೋಷಿ’ ಎಂದು ತೀರ್ಪು ನೀಡಿದೆ. 

ಎರಡನೇ ಆರೋಪಿ ಉತ್ತರ ಪ್ರದೇಶ ಮೂಲದ ಜಗದೀಶ್ ಪಟೇಲ್, ಮೂರನೇ ಆರೋಪಿ ಬೆಂಗಳೂರಿನ ಅಭಿ ಭಂಡಗಾರ, ನಾಲ್ಕನೇ ಆರೋಪಿ ಉಡುಪಿಯ ಗಣೇಶ ಭಜಂತ್ರಿ, ಐದನೇ ಆರೋಪಿ ಕೇರಳದ ಕೆ.ಎಂ.ಇಸ್ಮಾಯಿಲ್, ಏಳನೇ ಆರೋಪಿ ಹಾಸನದ ಮಹೇಶ ಅಚ್ಛಂಗಿ, ಎಂಟನೇ ಆರೋಪಿ ಕೇರಳದ ಸಂತೋಷ ಎಂ.ಬಿ, ಒಂಬತ್ತನೇ ಆರೋಪಿ ಉಡುಪಿ ಮೂಲದ ಬನ್ನಂಜೆ ರಾಜಾ, ಹತ್ತನೇ ಆರೋಪಿ ಬೆಂಗಳೂರಿನ ಜಗದೀಶ್ ಚಂದ್ರರಾಜ್, 12 ಆರೋಪಿ ಉತ್ತರ ಪ್ರದೇಶದ ಅಂಕಿತಕುಮಾರ್ ಕಶ್ಯಪ್ ದೋಷಿಗಳೆಂದು ಕೋರ್ಟ್ ತೀರ್ಪಿನಲ್ಲಿ ಹೇಳಿದೆ. ಉಳಿದಂತೆ ಪ್ರಕರಣದ 6ನೇ ಆರೋಪಿ ಕೇರಳದ ರಬ್ದಿನ್ ಫಿಚೈ, 11ನೇ ಆರೋಪಿ ಬೆಂಗಳೂರಿನ ಮಹ್ಮದ್ ಶಾಬಂದರಿ ಹಾಗೂ 16ನೇ ಆರೋಪಿ ಉತ್ತರ ಕನ್ನಡದ ಆನಂದ ರಮೇಶ್ ನಾಯಕ್ ‘ನಿರ್ದೋಷಿ’ ಎಂದು ನ್ಯಾಯಾಲಯ ಹೇಳಿದೆ.

ಶಿಕ್ಷೆಯ ಪ್ರಮಾಣವನ್ನು ಕಾಯ್ದಿರಿಸಿ ನ್ಯಾಯಾಧೀಶ ಸಿ.ಎಂ. ಜೋಶಿ ಮಹತ್ವದ ಆದೇಶ ಪ್ರಕಟಿಸಿದ್ದು, ಏಪ್ರಿಲ್ 4ರಂದು ಶಿಕ್ಷೆಯ ಪ್ರಮಾಣ ಪ್ರಕಟಿಸುವುದಾಗಿ ನ್ಯಾಯಾಧೀಶರು ತಿಳಿಸಿದ್ದಾರೆ.