ಹಲಾಲ್ ಕಟ್, ಜಟ್ಕಾ ಕಟ್ ನಡುವಿನ ವ್ಯತ್ಯಾಸವೇನು?

113
firstsuddi

ಬೆಂಗಳೂರು : ಹಿಜಾಬ್​ನಿಂದ ಆರಂಭವಾದ ಗಲಾಟೆ ಮುಸ್ಲಿಂ ವ್ಯಾಪಾರಿಗಳನ್ನು ದೇವಸ್ಥಾನದ ಆವರಣದಲ್ಲಿ ನಿಷೇಧ ಮಾಡುವುದು ಸೇರಿ ಈಗ ಹಲಾಲ್ ಗೆ ಬಂದು ನಿಂತಿದೆ. ಯುಗಾದಿ ಹೊಸತೊಡಕು ವೇಳೆ ಹಲಾಲ್ ಮಾಂಸ ಬಹಿಷ್ಕರಿಸಿ, ಹಿಂದೂಗಳ ಬಳಿಯೇ ಮಾಂಸ ಖರೀದಿ ಮಾಡುವಂತೆ ಸೋಷಿಯಲ್ ಮೀಡಿಯಾಗಳಲ್ಲಿ ದೊಡ್ಡ ಅಭಿಯಾನವೇ ನಡೆದಿದೆ. ಇದೀಗ ಹಲಾಲ್ ಕಟ್ ಹಾಗೂ ಜಟ್ಕಾ ಕಟ್ ಎಂದರೇನು ಎಂಬ ಪ್ರಶ್ನೆ ಎದ್ದಿದೆ. ಈ ಹಾಲಾಲ್ ಕಟ್ ಮತ್ತು ಜಟ್ಕಾ ಕಟ್ ಎಂದರೇನು ಎಂಬುದರ ಬಗ್ಗೆ ವಿವರ ಇಲ್ಲಿದೆ..

ಹಲಾಲ್ ಕಟ್ : ಮುಸ್ಲಿಂ ಧರ್ಮದ ಆಹಾರ ಕ್ರಮಕ್ಕೆ ಹಲಾಲ್ ಎನ್ನಲಾಗ್ತಿದೆ. ಹಲಾಲ್ ಕಟ್ ಪ್ರಕಾರ ಪ್ರಾಣಿಯ ಗಂಟಲು ಸೀಳಿ ರಕ್ತ ಬರಿದಾಗಿಸಿ ಕೊಲ್ಲಲಾಗುತ್ತದೆ. ಹಲಾಲ್ ಕಟ್ ಮಾಡುವವರು ಇಸ್ಲಾಂ ಧರ್ಮಕ್ಕೆ ಸೇರಿದವರಾಗಬೇಕು. ಪ್ರಾಣಿಯನ್ನು ಕೊಲ್ಲುವಾಗ ಮುಸಲ್ಮಾನರ ಪವಿತ್ರ ಸ್ಥಳ ಮೆಕ್ಕಾದ ದಿಕ್ಕಿಗೆ ಮುಖ ಮಾಡಿ ಪ್ರಾರ್ಥನೆ ಮಾಡಬೇಕು. ಮಾಂಸ ತಿನ್ನುವವರೂ ಪ್ರಾಣಿಗೆ ಒಳ್ಳೆಯದಾಗಲಿ ಎಂದು ಪ್ರಾರ್ಥನೆ ಮಾಡಬೇಕು.

ಜಟ್ಕಾ ಕಟ್ : ಜಟ್ಕಾ ಕಟ್ ಎಂದರೆ ಬಲಿ ಅಥವಾ ದೈವ ಬಲಿ ಎಂದರ್ಥ. ಹಿಂದೂ ಧರ್ಮದಲ್ಲಿ ಹಿರಿಯರು ಪಾಲನೆ ಪದ್ಧತಿ ಇದಾಗಿದೆ. ಜಟ್ಕಾ ಕಟ್ ಪ್ರಕಾರ ಒಂದೇ ಏಟಿಗೆ ಪ್ರಾಣಿಯ ರುಂಡ ಹಾಗೂ ಮುಂಡವನ್ನು ಬೇರ್ಪಡಿಸಲಾಗುತ್ತದೆ. ಈ ರೀತಿಯಲ್ಲಿ ಪ್ರಾಣಿಯ ಜೀವ ಒಂದೇ ಬಾರಿಗೆ ಹೋಗುತ್ತದೆ.