ಶ್ರೀ ಶಿವಕುಮಾರ ಸ್ವಾಮೀಜಿ 115 ನೇ ಜಯಂತಿ – ಟ್ವೀಟ್ ಮಾಡಿ ಮೋದಿ ನಮನ…

77
firstsuddi

ನವದೆಹಲಿ: ತುಮಕೂರಿನ ಸಿದ್ದಗಂಗಾ ಮಠದ ಲಿಂಗೈಕ್ಯ ಶ್ರೀ ಡಾ.ಶಿವಕುಮಾರ ಸ್ವಾಮೀಜಿ 115ನೇ ಜಯಂತೋತ್ಸವ ಅಂಗವಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಟ್ವೀಟ್ ಮಾಡಿ ಗೌರವ ನಮನ ಸಲ್ಲಿಸಿದ್ದಾರೆ.

ಪೂಜನೀಯರಾದ ಗೌರವಾನ್ವಿತ ಡಾ.ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಯವರ ಜಯಂತಿಯಂದು ನಾನು ನನ್ನ ಗೌರವ ನಮನ ಸಲ್ಲಿಸುವೆ. ಸ್ವಾಮೀಜಿಯವರು ಅಸಂಖ್ಯಾತ ಜನರ ಹೃದಯದಲ್ಲಿ ಅಮರರಾಗಿದ್ದಾರೆ. ಅಪ್ರತಿಮ ಸಮಾಜ ಸೇವಕರಾಗಿದ್ದರು, ಆರೋಗ್ಯ ಹಾಗೂ ಶಿಕ್ಷಣ ಕ್ಷೇತ್ರಕ್ಕೆ ಅವರು ನೀಡಿದ ಪ್ರಾಮುಖ್ಯ ಹಾಗೂ ಸರಿಸಾಟಿಯಿಲ್ಲದ ಅವರ ಸಾಮುದಾಯಿಕ ಸೇವೆಯಿಂದಾಗಿ ಅವರು ಸದಾ ಸ್ಮರಣೀಯರು. ಅವರ ಕನಸುಗಳನ್ನು ಈಡೇರಿಸಲು ನಾವು ಶ್ರಮಿಸೋಣ ಎಂದು ಟ್ವೀಟ್ ಮಾಡಿದ್ದಾರೆ.