ಮಸೀದಿಗಳ ಧ್ವನಿವರ್ಧಕ ನಿಷೇಧಿಸುವಂತೆ ರಾಜ್ಯ ಸರ್ಕಾರಕ್ಕೆ ಸಿದ್ದಲಿಂಗ ಸ್ವಾಮೀಜಿ ಒತ್ತಾಯ…

72
firstsuddi

ಕಲಬುರಗಿ : ಮಹಾರಾಷ್ಟ್ರದ ನವ ನಿರ್ಮಾಣ ಸೇನಾ (ಎಂಎನ್ಎಸ್) ಮುಖ್ಯಸ್ಥ ರಾಜ್ ಠಾಕ್ರೆ ಹೇಳಿಕೆಗೆ ಶ್ರೀರಾಮಸೇನೆ ರಾಜ್ಯಾಧ್ಯಕ್ಷ ಸಿದ್ಧಲಿಂಗ ಸ್ವಾಮೀಜಿ ಬೆಂಬಲ ನೀಡಿದ್ದು, ಮಸೀದಿಗಳ ಮೇಲಿರುವ ಧ್ವನಿವರ್ಧಕಗಳನ್ನು ನಿಷೇಧಿಸುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ರಾಜ್ಯದಲ್ಲಿ ಕೂಡಾ ಮಸೀದಿಯಲ್ಲಿನ ಧ್ವನಿವರ್ಧಕಗಳನ್ನು ಬಂದ್ ಮಾಡಬೇಕು. ಮಸೀದಿಗಳ ಮೇಲೆ ಹಾಕಲಾದ ಧ್ವನಿವರ್ಧಕಗಳಿಂದ ಸಾರ್ವಜನಿಕರಿಗೆ ಬಹಳಷ್ಟು ತೊಂದರೆ ಉಂಟಾಗುತ್ತಿದೆ. ಜೊತೆಗೆ ಪರಿಸರ ಮಾಲಿನ್ಯ ಕೂಡಾ ಆಗುತ್ತಿದೆ. ಹೀಗಾಗಿ ರಾಜ್ಯದಲ್ಲೂ ಸಹ ಮಸೀದಿಗಳ ಧ್ವನಿವರ್ಧಕಗಳನ್ನು ನಿಷೇಧಿಸಬೇಕು. ಇಲ್ಲವಾದರೆ ಮುಂಬರುವ ದಿನಗಳಲ್ಲಿ ಶ್ರೀರಾಮಸೇನೆಯ ನೇತೃತ್ವದಲ್ಲಿ ರಾಜ್ಯವ್ಯಾಪಿ ಹೋರಾಟವನ್ನು ಕೈಗೊಳ್ಳಬೇಕಾಗುತ್ತದೆ ಎಂದು ಸಿದ್ಧಲಿಂಗ ಸ್ವಾಮೀಜಿ ಎಚ್ಚರಿಕೆ ನೀಡಿದ್ದಾರೆ.

ಮಸೀದಿಗಳಲ್ಲಿರುವ ಧ್ವನಿವರ್ಧಕಗಳನ್ನು ತೆಗೆದುಹಾಕುವಂತೆ ರಾಜ್ ಠಾಕ್ರೆ ಶನಿವಾರ ಮಹಾರಾಷ್ಟ್ರ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದು, ಒಂದು ವೇಳೆ ಧ್ವನಿವರ್ಧಕಗಳನ್ನು ತೆಗೆಯದಿದ್ದರೆ, ಮಸೀದಿಗಳ ಮುಂದೆ ಧ್ವನಿವರ್ಧಕಗಳನ್ನು ಇಟ್ಟು ಹನುಮಾನ್ ಚಾಲೀಸಾ ನುಡಿಸುವ ಎಚ್ಚರಿಕೆ ನೀಡಿದ್ದರು.