ಅಪರಿಚಿತ ವಾಹನ ಡಿಕ್ಕಿಯಾಗಿ ಪೊಲೀಸ್ ಕಾನ್ಸ್ ಸ್ಟೇಬಲ್ ಸಾವು…

52
firstsuddi

ಹುಬ್ಬಳ್ಳಿ : ಅಪರಿಚಿತ ವಾಹನ ಡಿಕ್ಕಿಯಾಗಿ ಕರ್ತವ್ಯನಿರತ ಪೊಲೀಸ್ ಕಾನ್ಸ್ ಸ್ಟೇಬಲ್ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲೂಕಿನ ಬುಡನಾಳ ಕ್ರಾಸ್ ಬಳಿ ನಡೆದಿದೆ.

ಕಲಘಟಗಿ ಪೊಲೀಸ್ ಠಾಣೆಯ ಪಂಡಿತ ಕಾಸರ್(28) ಮೃತ ಪೊಲೀಸ್ ಕಾನ್ಸ್ ಸ್ಟೇಬಲ್. ತಾಲೂಕಿನ ಬುಡನಾಳ ಕ್ರಾಸ್ ಬಳಿ ನಿನ್ನೆ ಸಂಜೆ ಮಳೆ, ಬಿರುಗಾಳಿಯಿಂದ ರಸ್ತೆಯಲ್ಲಿ ಮರಗಳು ಬಿದ್ದಿದ್ದವು. ಇದರಿಂದ ಹುಬ್ಬಳ್ಳಿ-ಕಾರವಾರ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿತ್ತು. ಟ್ರಾಫಿಕ್ ಕ್ಲಿಯರ್ ಮಾಡಲು ಪೊಲೀಸರು ಸ್ಥಳಕ್ಕೆ ಬಂದಿದ್ದರು. ಈ ವೇಳೆ ಅಪರಿಚಿತ ವಾಹನ ಡಿಕ್ಕಿ ಆಗಿದೆ. ಪರಿಣಾಮ ಕಾನ್ಸ್ ಸ್ಟೇಬಲ್ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ ಎಂದು ಹೇಳಲಾಗಿದೆ. ಗಾಯಗೊಂಡವರನ್ನ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ರವಾನೆ‌ ಮಾಡಲಾಗಿದೆ. ಘಟನೆ ಸಂಬಂಧ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.