ಬೆಳಗಾವಿ ಆರ್‌ಎಸ್‌ಎಸ್ ಕಚೇರಿಗೆ ಗೋವಾ ಸಿಎಂ ಪ್ರಮೋದ್ ಸಾವಂತ್ ಭೇಟಿ…

70
firstsuddi

ಬೆಳಗಾವಿ : ಇಂದು ಬೆಳಗಾವಿಯ ಆರ್‌ಎಸ್‌ಎಸ್ ಕಚೇರಿಗೆ ಭೇಟಿ ನೀಡಿದ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರು ಮುಖಂಡರ ಜೊತೆ ಕೆಲ ಹೊತ್ತು ಚರ್ಚೆ ನಡೆಸಿದರು. ಖಾಸಗಿ ಕಾರ್ಯಕ್ರಮಗಳ ನಿಮಿತ್ತ ಪ್ರಮೋದ್ ಸಾವಂತ್ ಬೆಳಗಾವಿಗೆ ಆಗಮಿಸಿದ್ದಾರೆ.

ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 2024ರ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಮುನ್ನಡೆಯುತ್ತಿರುವ ಬಿಜೆಪಿ ಸರ್ಕಾರ ಮತ್ತೊಮ್ಮೆ ಅಧಿಕಾರಕ್ಕೆ ಬರುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಆರ್‌ಎಸ್‌ಎಸ್ ಕಚೇರಿಗೆ ಭೇಟಿ ನೀಡಿದ ವಿಚಾರವಾಗಿ ಮಾತನಾಡಿದ ಸಾವಂತ್ ನಾನು ಎಲ್ಲೇ ಹೋದರೂ ಆರ್‌ಎಸ್‌ಎಸ್ ಕಚೇರಿಗೆ ಭೇಟಿ ಕೊಡುತ್ತೇನೆ. ಅದೇ ರೀತಿ ಇಲ್ಲಿಯೂ ಭೇಟಿ ಕೊಟ್ಟಿದ್ದೇನೆ. ಎರಡನೇ ಬಾರಿಗೆ ಗೋವಾ ಸಿಎಂ ಆಗಿದ್ದಕ್ಕೆ ಬಿಜೆಪಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ಮುಂಬರುವ ನನ್ನ ಆಡಳಿತದ ಅವಧಿಯಲ್ಲಿ ಗೋವಾದಲ್ಲಿ ಪ್ರವಾಸೋದ್ಯಮ, ಉದ್ಯೋಗ ಸೃಷ್ಟಿಗೆ ಹೆಚ್ಚಿನ ಮಹತ್ವ ಕೊಡುತ್ತೇನೆ ಎಂದರು.