ಗೃಹ ಸಚಿವರ ವಿರುದ್ಧ ತುಮಕೂರು ಯುವ ಕಾಂಗ್ರೆಸ್ ಘಟಕದಿಂದ ದೂರು ದಾಖಲು…

54
firstsuddi

ತುಮಕೂರು : ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ವಿರುದ್ಧ ತುಮಕೂರು ಯುವ ಕಾಂಗ್ರೆಸ್ ಘಟಕದಿಂದ ದೂರು ದಾಖಲಾಗಿದೆ.

ತುಮಕೂರು ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಶಶಿಹುಲಿಕುಂಟೆಮಠ್ ನೇತೃತ್ವದಲ್ಲಿ ತುಮಕೂರು ಎಎಸ್ ಪಿ ಉದೇಶ್ ಗೆ ದೂರು ಸಲ್ಲಿಸಿದ್ದು, ಜಾತಿಗಳ ಮಧ್ಯೆ ಕೋಮುಗಲಭೆ ಸೃಷ್ಟಿ ಮಾಡುವ ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ. ಹೀಗಾಗಿ ಕ್ರಮ ಕೈಗೊಳ್ಳಿ ಎಂದು ಒತ್ತಾಯಿಸಿದ್ದಾರೆ.

ಚಂದ್ರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಮಾಧ್ಯಮದ ಮುಂದೆ ಪ್ರತಿಕ್ರಿಯೆ ನೀಡುವಾಗ ಉರ್ದು ಮಾತನಾಡದಿದ್ದಕ್ಕೆ ಹತ್ಯೆ ಮಾಡಿದ್ದಾರೆ ಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆ ಬಹಳಷ್ಟು ವಿವಾದಕ್ಕೆ ಕಾರಣವಾಗಿದೆ.