ಅಪ್ರಾಪ್ತೆ ಮೇಲೆ 8 ಜನರಿಂದ ನಿರಂತರ ಸಾಮೂಹಿಕ ಅತ್ಯಾಚಾರ…

75
firstsuddi

ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. 16 ವರ್ಷದ ಬಾಲಕಿ ಮೇಲೆ 8 ಜನ ನಿರಂತರ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಯಲಹಂಕ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಪ್ರಕರಣದ ಪ್ರಮುಖ ಆರೋಪಿ ಮೊದಲು ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ವಿಡಿಯೋ ರೆಕಾರ್ಡ್ ಮಾಡಿಕೊಂಡಿದ್ದಾನೆ. ಬಳಿಕ ಈ ವಿಚಾರ ತಿಳಿಸಿದರೆ ಕೊಲೆ ಮಾಡೋದಾಗಿ ಬೆದರಿಕೆ ಹಾಕಿದ್ದ. ನಂತರ ವಿಡಿಯೋ ತೋರಿಸಿ ಬೆದರಿಸಿ ಎಂಟು ಜನ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ.

ವಿಷಯ ತಿಳಿದು ಪೋಷಕರು ಏಪ್ರಿಲ್ 5ರಂದು ಯಲಹಂಕ ಠಾಣೆಗೆ ದೂರು ನೀಡಿದ್ದಾರೆ. ಕೂಡಲೇ ಪೋಕ್ಸೋ, ಅತ್ಯಾಚಾರ, ಲೈಂಗಿಕ ದೌರ್ಜನ್ಯ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಒಟ್ಟು 7 ಜನ ಆರೋಪಿಗಳನ್ನು ಬಂಧಿಸಿದ್ದು, ಮತ್ತೊಬ್ಬ ಆರೋಪಿಗಾಗಿ ಶೋಧಕಾರ್ಯ ಮುಂದುವರೆಸಿದ್ದಾರೆ.