ಶ್ರೀರಾಮ ಶೋಭಾಯಾತ್ರೆ ಮೇಲೆ ಕಲ್ಲು ತೂರಾಟ – ಆರು ಶಂಕಿತರು ಪೊಲೀಸ್ ವಶ…

62
firstsuddi

ಕೋಲಾರ : ಶ್ರೀರಾಮ ಶೋಭಾಯಾತ್ರೆ ಮೇಲೆ ಕಲ್ಲು ತೂರಾಟ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿ ಶಂಕಿತರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಇತರ ಆರೋಪಿಗಳಿಗಾಗಿ ಶೋಧಕಾರ್ಯ ಮುಂದುವರಿಸಿದ್ದಾರೆ.

ಲವಕುಶ ಜನ್ಮಭೂಮಿ ಪುಣ್ಯಕ್ಷೇತ್ರ ಟ್ರಸ್ಟ್ ವತಿಯಿಂದ ಶ್ರೀರಾಮನವಮಿ ಪ್ರಯುಕ್ತ ಅದ್ಧೂರಿ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗಿತ್ತು. ಅದರ ಮೊದಲ ದಿನದ ಅಂಗವಾಗಿ ಶ್ರೀರಾಮನ ಶೋಭಾಯಾತ್ರೆ ಮುಳಬಾಗಿಲು ಪಟ್ಟಣದಲ್ಲಿ ನಡೆಯುತ್ತಿತ್ತು. ನಿನ್ನೆ ಮಧ್ಯಾಹ್ನ 3 ಗಂಟೆ ಸುಮಾರಿಗೆ ಆರಂಭವಾದ ಶೋಭಾಯಾತ್ರೆ ಸಂಜೆ 7.30ರ ಸುಮಾರಿಗೆ ಮುಳಬಾಗಿಲು ಪಟ್ಟಣದ ಜಹಂಗೀರ್ ಸರ್ಕಲ್ ಬಳಿ ಬರುತ್ತಿದ್ದಂತೆ ವಿದ್ಯುತ್ ಸಂಪರ್ಕ ಕಡಿತವಾಗಿದೆ. ರಸ್ತೆಯಲ್ಲಿ ಕತ್ತಲು ಆವರಿಸುತ್ತಿದ್ದ ಕೆಲವೇ ಕ್ಷಣಗಳಲ್ಲಿ ಶೋಭಾಯಾತ್ರೆ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದು, ಪ್ರಕ್ಷುಬ್ಧ ವಾತಾವರಣ ಸೃಷ್ಟಿಯಾಯಿತು. ಈ ವೇಳೆ ಪರಿಸ್ಥಿತಿಯಲ್ಲಿ ನಿಯಂತ್ರಿಸಿಲು ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ.

ರಸ್ತೆ ಬಳಿ ಇದ್ದ ಜನರೆಲ್ಲಾ ಅಂಗಡಿಗಳನ್ನು ಬಂದ್ ಮಾಡಿ, ಕೆಲವು ಕಿಡಿಗೇಡಿಗಳು ರಸ್ತೆ ಬಳಿ ಇದ್ದ ಬೈಕ್ವೊಂ ದಕ್ಕೆ ಬೆಂಕಿ ಹಚ್ಚಿದ್ದಾರೆ. ರಸ್ತೆ ಬದಿ ಇದ್ದ ಕೆಲವು ಕಾರ್ ಗಳ ಮೇಲೆ ಪೊಲೀಸರ ವಾಹನಗಳ ಮೇಲೂ ಕಲ್ಲು ತೂರಾಟ ಮಾಡಿದ್ದಾರೆ. ಸ್ಥಳಕ್ಕೆ ಬಂದ ಹಿರಿಯ ಪೊಲೀಸ್ ಅಧಿಕಾರಿಗಳು ಪರಿಸ್ಥಿತಿಯನ್ನು ನಿಯಂತ್ರಣ ಮಾಡಿ ಶೋಭಾಯಾತ್ರೆಯನ್ನು ಮುಂದುವರೆಯಲು ಅನುವು ಮಾಡಿಕೊಟ್ಟಿದ್ದಾರೆ. ಘಟನೆ ಬಳಿಕ ಮುಳಬಾಗಿಲು ತಾಲ್ಲೂಕಿನಲ್ಲಿ ತೀವ್ರ ಬಂದೋಬಸ್ತ್ ಏರ್ಪಡಿಸಲಾಗಿದೆ.