ಇಂದು ಪ್ರಧಾನಿ ಮೋದಿ, ಅಮೆರಿಕ ಅಧ್ಯಕ್ಷ ಬೈಡನ್ ವರ್ಚುವಲ್ ಸಭೆ…

69
firstsuddi

ನವದೆಹಲಿ : ಇಂದು ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರು ವರ್ಚುಲ್ ಸಭೆ ನಡೆಸಲಿದ್ದಾರೆ.

ಸಭೆ ವೇಳೆ ಉಭಯ ರಾಷ್ಟ್ರಗಳ ನಡುವೆ ದ್ವಿಪಕ್ಷೀಯ ಸಹಕಾರ ಪರಿಶೀಲನೆ, ದಕ್ಷಿಣ ಏಷ್ಯಾದಲ್ಲಿನ ಇತ್ತೀಚಿನ ಬೆಳವಣಿಗೆಗಳು ಹಾಗೂ ಇಂಡೋ-ಪೆಸಿಫಿಕ್ ಮತ್ತು ಪರಸ್ಪರ ಆಸಕ್ತಿಯ ಜಾಗತಿಕ ಸಮಸ್ಯೆಗಳ ಕುರಿತು ಚರ್ಚೆ ನಡೆಸಲಿದ್ದಾರೆ. ವರ್ಚುವಲ್ ಸಭೆಯು ದ್ವಿಪಕ್ಷೀಯ ಸಮಗ್ರ ಜಾಗತಿಕ ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸುವ ಗುರಿಯೊಂದಿಗೆ ಸಹಭಾಗಿತ್ವವನ್ನು ಮುಂದುವರಿಸಲು ಎರಡೂ ರಾಷ್ಟ್ರಗಳಿಗೆ ಅನುವು ಮಾಡಿಕೊಡುತ್ತದೆ’ ಎಂದು ಎಂಇಎ ಹೇಳಿಕೆಯಲ್ಲಿ ತಿಳಿಸಿದೆ.

ರಷ್ಯಾ-ಉಕ್ರೇನ್ ಯುದ್ಧ ಆರಂಭವಾದ ಮೇಲೆ ಭಾರತ ಮತ್ತು ಅಮೆರಿಕದ ನಡುವೆ ಸಣ್ಣಮಟ್ಟದ ಭಿನ್ನಾಭಿಪ್ರಾಯ ಮೂಡಿದೆ. ವಿಶ್ವದ ಬಹುತೇಕ ರಾಷ್ಟ್ರಗಳು ರಷ್ಯಾದ ಕ್ರಮವನ್ನು ಖಂಡಿಸಿ ನಿರ್ಬಂಧ ಹೇರಿದ್ದರೂ ಅದೇ ದೇಶದಿಂದ ತೈಲ ಆಮದು ಮಾಡಿಕೊಳ್ಳುತ್ತಿರುವ ಭಾರತದ ವಿರುದ್ಧ ಅಮೆರಿಕ ಮುನಿಸಿಕೊಂಡಿದೆ. ಈ ನಡುವೆ ಇಂದು ನಡೆಯಲಿರುವ ವರ್ಚುವಲ್ ಸಭೆ ಬಹಳ ಮಹತ್ವದ್ದಾಗಿದೆ.