ಕೊಪ್ಪಳ : ರಸ್ತೆ ಅಪಘಾತದಲ್ಲಿ ಸಂಸದ ಸಂಗಣ್ಣ ಕರಡಿ ಅವರ ಸಹೋದರ ಸಾವನ್ನಪ್ಪಿದ್ದಾರೆ.
ಬಸಣ್ಣ ಕರಡಿ ಮೃತ ದುರ್ದೈವಿ. ತಾಲೂಕಿನ ಟಣಕನಕಲ್ ಗ್ರಾಮದ ಬಳಿ ಅಪಘಾತ ಸಂಭವಿಸಿದೆ. ಬಸಣ್ಣ ಕರಡಿ ಅವರು ಕೊಪ್ಪಳದಿಂದ ಟಣಕನಕಲ್ ಗೆ ಹೋಗುತ್ತಿದ್ದರು. ಈ ವೇಳೆ ಯಲಮಗೇರಿಯಿಂದ ಕೊಪ್ಪಳಕ್ಕೆ ಬರುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ. ಪರಿಣಾಮ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.










