ಉಡುಪಿ : ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ಉಡುಪಿ ನಗರ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.
ಸಂತೋಷ್ ಆತ್ಮಹತ್ಯೆ ವಿಚಾರ ಬೆಳಕಿಗೆ ಬರುತ್ತಿದ್ದಂತೆಯೇ ಈಶ್ವರಪ್ಪ ವಿರುದ್ಧ ಸಂತೋಷ್ ಸಹೋದರ ಪ್ರಶಾಂತ್ ದೂರು ದಾಖಲಿಸಿದ್ದು, ದೂರಿನಲ್ಲಿ ಸಂತೋಷ್ ಸಾವಿಗೆ ಕಮಿಷನ್ ಕಾಟವೇ ಕಾರಣ ಎಂದು ಉಲ್ಲೇಖಿಸಿದ್ದಾರೆ. ಪ್ರಕರಣದಲ್ಲಿ ಎ-1 ಆರೋಪಿ ಸಚಿವ ಕೆ.ಎಸ್ ಈಶ್ವರಪ್ಪ, ಎ-2 ಈಶ್ವರಪ್ಪ ಆಪ್ತ ಬಸವರಾಜ್ ಹಾಗೂ ಎ-3 ಈಶ್ವರಪ್ಪ ಆಪ್ತ ರಮೇಶ್ ವಿರುದ್ಧ ಐಪಿಸಿ ಸೆಕ್ಷನ್ 306 (ಆತ್ಮಹತ್ಯೆಗೆ ಪ್ರಚೋದನೆ) ರಡಿ ಎಫ್ ಐಆರ್ ದಾಖಲು ಮಾಡಿಕೊಳ್ಳಲಾಗಿದೆ.
ಇತ್ತ ರಾತ್ರಿಯೇ ಉಡುಪಿಯಲ್ಲಿರುವ ಖಾಸಗಿ ಲಾಡ್ಜ್ ಗೆ 8 ಮಂದಿ ಸಂತೋಷ್ ಪಾಟೀಲ್ ಕುಟುಂಬಿಕರು ಆಗಮಿಸಿದ್ದಾರೆ. ಎಫ್ಎಸ್ಎಲ್ ತಂಡ ಕೂಡ ಲಾಡ್ಜ್ ಗೆ ಆಗಮಿಸಿದೆ.










