ನವದೆಹಲಿ : ಹಿಜಾಬ್ ಪ್ರಕರಣ ಸಂಬಂಧ ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಗಳಿಗೆ ಬೆದರಿಕೆ ಹಾಕಿದ್ದ ಆರೋಪಿ ಪ್ರಕರಣವನ್ನು ಮಧುರೈಗೆ ವರ್ಗಾಯಿಸುವಂತೆ ಅಥವಾ ವಜಾಗೊಳಿಸುವಂತೆ ಅರ್ಜಿ ಸಲ್ಲಿಸಿದ್ದನು. ಈ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಆರೋಪಿಗೆ ನೋಟಿಸ್ ನೀಡಿದೆ.
ಕರ್ನಾಟಕ ಹೈಕೋರ್ಟ್ ಜಡ್ಜ್ ಗಳಿಗೆ ತಮಿಳುನಾಡು ಮೂಲದ ಇಸ್ಲಾಮಿಕ್ ಸಂಘಟನೆಗಳು ಜೀವ ಬೆದರಿಕೆ ಹಾಕಿರುವ ಆರೋಪವಿದ್ದು, ಈ ಬೆದರಿಕೆಯ ಬಳಿಕ ಮುಖ್ಯ ನ್ಯಾಯಮೂರ್ತಿ ಸೇರಿ ಮೂವರು ನ್ಯಾಯಮೂರ್ತಿಗಳಿಗೆ ವೈ ಶ್ರೇಣಿಯ ಭದ್ರತೆ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿತ್ತು. ನಂತರ ತನಿಖೆ ನಡೆಸಿದ ಪೊಲೀಸರು ಇಬ್ಬರು ವ್ಯಕ್ತಿಗಳನ್ನು ಬಂಧಿಸಿದ್ದು, ವಿಚಾರಣೆ ನಡೆಸಲಾಗುತ್ತಿದೆ.










