ನಾವು ಭಾರತೀಯರೆಂದು ಸಾಬೀತುಪಡಿಸಲು ಹಿಂದಿ ಕಲಿಯುವ ಅಗತ್ಯವಿಲ್ಲ : ಅಣ್ಣಾಮಲೈ.

58
firstsuddi

ಚೆನ್ನೈ : ಇಂಗ್ಲಿಷ್ ಗೆ ಪರ್ಯಾಯವಾಗಿ ಹಿಂದಿ ಬಳಸಬೇಕು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆಗೆ ದೇಶಾದ್ಯಂತ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಇದೀಗ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಅಮಿತ್ ಶಾ ಹೇಳಿಕೆಗೆ ವಿರೋಧ ವ್ಯಕ್ತಪಡಿಸಿದ್ದಾರೆ.

ತಮಿಳುನಾಡು ಬಿಜೆಪಿ ರಾಜ್ಯದಲ್ಲಿ ಹಿಂದಿ ಹೇರಿಕೆಗೆ ಅವಕಾಶ ನೀಡುವುದಿಲ್ಲ. ನಮ್ಮ ದೇಶದಲ್ಲಿ ತಮಿಳು ಸಂಪರ್ಕ ಭಾಷೆಯಾದರೆ ಪಕ್ಷಕ್ಕೆ ಹೆಮ್ಮೆಯಾಗುತ್ತದೆ. ಭಾರತೀಯರು ಎಂದು ಸಾಬೀತುಪಡಿಸಲು ನಾವು ಬಲವಂತವಾಗಿ ಹಿಂದೆ ಭಾಷೆ ಕಲಿಯುವ ಅಗತ್ಯವಿಲ್ಲ. ನಮ್ಮಲ್ಲಿ ಯಾರೂ ಸಹ ಹಿಂದಿ ಮಾತನಾಡುವುದಿಲ್ಲ. ಆದರೆ, ವೃತ್ತಿ, ವ್ಯಾಪಾರ ಅಥವಾ ಶಿಕ್ಷಣದ ಭಾಗವಾಗಿ ಕಲಿಯಲು ಬಯಸಿದರೆ ನಮ್ಮ ಆಕ್ಷೇಪವಿಲ್ಲ ಎಂದು ಹೇಳಿದರು.