ಹೈದರಾಬಾದ್ : ತೆಲಂಗಾಣದ ಮಾಜಿ ಶಾಸಕರೊಬ್ಬರ ಮಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಅಶ್ವಾರಾವುಪೇಟೆಯ ಮಾಜಿ ಶಾಸಕ ತಾಟಿ ವೆಂಕಟೇಶ್ವರ್ಲು ಮಗಳು 26 ವರ್ಷದ ತಾಟಿ ಮಹಾಲಕ್ಷ್ಮಿ ಆತ್ಮಹತ್ಯೆ ಮಾಡಿಕೊಂಡವರು. ಬೂರ್ಗಂಪಾಡು ತಾಲೂಕಿನ ಸಾರಾಪಾಕದಲ್ಲಿರುವ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಹಾಲಕ್ಷ್ಮಿ ಎಂಬಿಬಿಎಸ್ ವ್ಯಾಸಂಗ ಮುಗಿಸಿದ್ದು, ಮುಂದಿನ ವಿದ್ಯಾಭ್ಯಾಸಕ್ಕೆ ತಯಾರಿ ನಡೆಸುತ್ತಿದ್ದರು. ಆದರೆ ಇಂದು ಮುಂಜಾನೆ ಸೀಲಿಂಗ್ ಫ್ಯಾನ್ ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಮೃತದೇಹವನ್ನು ಭದ್ರಾಚಲಂ ಏರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ.










