ರಾಜಕಾರಣ ಗೊತ್ತಿರುವವನು ಆತ್ಮಹತ್ಯೆಗೆ ಶರಣಾಗಿದ್ದೇಕೆ? – ಅನುಮಾನ ವ್ಯಕ್ತಪಡಿಸಿದ ಸಿ.ಟಿ.ರವಿ.

96
firstsuddi

ಚಿಕ್ಕಮಗಳೂರು : ಗುತ್ತಿಗೆದಾರ ಸಂತೋಷ್ ಪಾಟೀಲ್ ಸಾವಿನ ಬಗ್ಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅನುಮಾನವನ್ನು ವ್ಯಕ್ತಪಡಿಸಿದ್ದಾರೆ.

ನಗರದಲ್ಲಿ ಪ್ರಕರಣ ಕುರಿತು ಮಾತನಾಡಿದ ಅವರು, ಈಶ್ವರಪ್ಪ, ರಾಜ್ಯಾಧ್ಯಕ್ಷರು, ಮುಖ್ಯಮಂತ್ರಿಗಳು ರಾಜೀನಾಮೆ ಕುರಿತು ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತಾರೆ. ಡಿವೈಎಸ್ ಪಿ ಗಣಪತಿ, ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣವನ್ನು ಹೋಲಿಕೆ ಮಾಡಲು ಬರುವುದಿಲ್ಲ. ಸಮಾಜದಲ್ಲಿ ಸತ್ತವರ ಪರ ಸ್ವಾಭಾವಿಕವಾಗಿ ಸಿಂಪಥಿ ಇರುತ್ತೆ. ನಾನು ಶಾಸಕನಾಗಿ ರಿಸ್ಕ್ ತೆಗೆದುಕೊಂಡು 5-10 ಲಕ್ಷದ ಕೆಲಸವನ್ನ ಮಾಡಿಸಿದ್ದೇನೆ ಎಂದರು.

ಸಂತೋಷ್ ಪಾಟೀಲ್ ದೆಹಲಿಗೆ ಹೋಗಿ ಸುದ್ದಿಗೋಷ್ಠಿ ಮಾಡುತ್ತಾರೆ. ಸಾಮಾನ್ಯ ವ್ಯಕ್ತಿಗಳು ದೆಹಲಿಗೆ ಹೋಗಿ ಸುದ್ದಿಗೋಷ್ಠಿ ಮಾಡಲು ಆಗುತ್ತಾ? ಅಷ್ಟೆಲ್ಲಾ ರಾಜಕಾರಣ ಗೊತ್ತಿರುವವನು ಆತ್ಮಹತ್ಯೆಗೆ ಯಾಕೆ ಶರಣಾದ? ನಿಜವಾಗಲೂ ಆತ್ಮಹತ್ಯೆ ನಡೆದಿದ್ಯಾ? ಅಥವಾ ಇದರ ಹಿಂದೆ ಬೇರೆ ಏನಾದರೂ ಇದ್ಯಾ? ಈ ಎಲ್ಲದರ ಬಗ್ಗೆ ಸಮಗ್ರವಾದ ತನಿಖೆಯಾಗಬೇಕು ಎಂದು ಅನುಮಾನ ಹೊರಹಾಕಿದ ಸಿ.ಟಿ.ರವಿ, ಕೋಟಿಗಟ್ಟಲೆ ಕಾಮಗಾರಿಯನ್ನು ಮಂಜೂರು ಆಗದೇ ಕೆಲಸ ಮಾಡೋಕೆ ಬರುತ್ತಾ? ಸಂತೋಷ್ ಸಾವಿನ ಸುತ್ತ ಅನುಮಾನದ ಹುತ್ತ ಇರೋದು ಸ್ಪಷ್ಟವಾಗಿದೆ. ಯಾರೇ ತಪ್ಪಿತಸ್ಥರಿದ್ದರೂ ಕ್ರಮ ಆಗಬೇಕು ಎಂದು ಆಗ್ರಹಿಸಿದರು.