ಕೆ ಎಸ್ ಈಶ್ವರಪ್ಪ ರಾಜೀನಾಮೆಗೂ ಮುನ್ನವೇ 29 ಪಿಡಿಒಗಳ ವರ್ಗಾವಣೆ…

65
firstsuddi

ಮೈಸೂರು : ಸಚಿವ ಕೆ ಎಸ್ ಈಶ್ವರಪ್ಪ ಅವರು ರಾಜೀನಾಮೆ ನೀಡುವ ಮುನ್ನವೇ 29 ಮಂದಿ ಪಿಡಿಒಗಳನ್ನು ವರ್ಗಾವಣೆ ಮಾಡಲಾಗಿದ್ದು, ಹಲವು ಅನುಮಾನಗಳಿಗೆ ಎಡೆಮಾಡಿ ಕೊಟ್ಟಿದೆ.

ಏಪ್ರಿಲ್ 12ರಂದು ಗುತ್ತಿಗೆದಾರ ಸಂತೋಷ್ ಪಾಟೀಲ್ ಉಡುಪಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಆ ವೇಳೆ ಸಚಿವ ಈಶ್ವರಪ್ಪ ಮೈಸೂರಿನಲ್ಲಿ ಇದ್ದರು. ಇದೇ ದಿನದಂದು ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ 29 ಪಿಡಿಒಗಳ ವರ್ಗಾವಣೆ ಮಾಡಿರುವ ವಿಚಾರ ಬೆಳಕಿಗೆ ಬಂದಿದೆ.

ರಾಜೀನಾಮೆ ನೀಡುವ ಪರಿಸ್ಥಿತಿ ಎದುರಾಗಲಿದೆ ಎಂಬ ಮಾಹಿತಿ ಗೊತ್ತಿದ್ದರೂ ಸಹ ಪಿಡಿಒಗಳನ್ನು ಯಾಕೆ ವರ್ಗಾವಣೆ ಮಾಡಿದ್ದೀರಾ ಎಂದು ಪ್ರಶ್ನಿಸಿರುವ ಕಾಂಗ್ರೆಸ್ ಮುಖಂಡರು ಮುಖ್ಯಮಂತ್ರಿಗಳು ಈ ವರ್ಗಾವಣೆ ಆದೇಶ ತಕ್ಷಣ ಹಿಂಪಡೆಯಬೇಕೆಂದು ಒತ್ತಾಯಿಸಿದ್ದಾರೆ.