ಮೀನಿನ ಫ್ಯಾಕ್ಟರಿಯಲ್ಲಿ ವಿಷಾನಿಲ ಸೋರಿಕೆ – ಐದು ಮಂದಿ ಕಾರ್ಮಿಕರು ಸಾವು…

57
firstsuddi

ಮಂಗಳೂರು : ಎಂಎಸ್ಇಝಡ್( ಮಂಗಳೂರು ವಿಶೇಷ ಆರ್ಥಿಕ ವಲಯ)ನಲ್ಲಿರುವ ಮೀನಿನ ಫ್ಯಾಕ್ಟರಿಯಲ್ಲಿ ವಿಷಾನಿಲ ಸೋರಿಕೆಯಾಗಿ ಐದು ಮಂದಿ ಕಾರ್ಮಿಕರು ಸಾವನ್ನಪ್ಪಿದ್ದಾರೆ.

ಪಶ್ಚಿಮ ಬಂಗಾಳದ ಉಮರ್ ಫಾರೂಕ್, ನಿಝಾಮುದ್ದೀನ್ ಸಾಬ್, ಸಮೀರುಲ್ಲಾ ಇಸ್ಲಾಂ ಸೇರಿದಂತೆ ಐವರು ಮೃತಪಟ್ಟಿದ್ದಾರೆ. ನಿನ್ನೆ ರಾತ್ರಿ ಕಾರ್ಮಿಕನೊಬ್ಬ ಮೀನಿನ ತ್ಯಾಜ್ಯದ ಟ್ಯಾಂಕನ್ನು ಶುಚಿಗೊಳಿಸಲು ಕೆಳಗಿಳಿದಿದ್ದ. ಈ ವೇಳೆ ಏಕಾಏಕಿ ಅಸ್ವಸ್ಥಗೊಂಡು ಬಿದ್ದಿದ್ದಾನೆ.
ಆತನನ್ನು ರಕ್ಷಿಸಲು 8 ಮಂದಿ ಕಾರ್ಮಿಕರು ಹೋಗಿದ್ದು, ಅವರು ಕೂಡಾ ಅಸ್ವಸ್ಥಗೊಂಡಿದ್ದಾರೆ ಎಂದು ಹೇಳಲಾಗಿದೆ.

ಕೂಡಲೇ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇವರಲ್ಲಿ ಐದು ಮಂದಿ ಮೃತಪಟ್ಟಿದ್ದರೆ, ಮೂವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಡಿಸಿಪಿ ಹರಿರಾಂ ಶಂಕರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.