ಬೆಂಗಳೂರು : ಮುಖ್ಯಮಂತ್ರಿ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ರಣದೀಪ್ ಸಿಂಗ್ ಸುರ್ಜೇವಾಲಾ ಸೇರಿದಂತೆ ಒಟ್ಟು 36 ಮಂದಿ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ ಏಪ್ರಿಲ್ 14 ರಂದು ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದ್ದರು. ಈ ವೇಳೆ ಮುಖ್ಯಮಂತ್ರಿ ನಿವಾಸಕ್ಕೆ ಮುತ್ತಿಗೆ ಹಾಕಲು ಪ್ರಯತ್ನಿಸಿದ್ದರು. ಅನುಮತಿ ಇಲ್ಲದೆ, ಅಕ್ರಮ ಕೂಟ ಸೇರಿ ಸಂಚಾರಕ್ಕೆ ಅಡ್ಡಪಡಿಸಿ ಪತ್ರಿಭಟನೆ ನಡೆಸಿದ ಆರೋಪ ಹಿನ್ನೆಲೆ ಹೈ ಗ್ರೌಂಡ್ಸ್ ಠಾಣೆಯಲ್ಲಿ ಐಪಿಸಿ 143, 341 ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.










