ಶ್ರೀಲಂಕಾದಲ್ಲಿ ಪ್ರತಿಭಟನಾಕಾರರ ಮೇಲೆ ಫೈರಿಂಗ್ – ಓರ್ವ ಸಾವು…

54
firstsuddi

ಕೊಲಂಬೋ : ಶ್ರೀಲಂಕಾದಲ್ಲಿ ಆರ್ಥಿಕ ಬಿಕ್ಕಟ್ಟಿನಿಂದಾಗಿ ದಿನೇ ದಿನೇ ಪರಿಸ್ಥಿತಿ ಹದಗೆಡುತ್ತಿದೆ. ಆಹಾರ, ಇಂಧನ ಮತ್ತು ಅಗತ್ಯವಸ್ತುಗಳ ಕೊರತೆ ಉಂಟಾಗಿದೆ. ಹೀಗಾಗಿ ಸರ್ಕಾರದ ವಿರುದ್ಧ ತೀವ್ರವಾದ ಪ್ರತಿಭಟನೆ ನಡೆಯುತ್ತಿದೆ.

ರಾಜಧಾನಿ ಕೊಲಂಬೊದಿಂದ 95 ಕಿಲೋ ಮೀಟರ್ ದೂರದಲ್ಲಿರುವ ಮಧ್ಯ ಶ್ರೀಲಂಕಾದ ರಂಬುಕ್ಕನಾದಲ್ಲಿ ತೀವ್ರ ತೈಲ ಕೊರತೆ ಉಂಟಾಗಿದ್ದು, ಪೆಟ್ರೊಲ್ ಬೆಲೆ 84 ರೂ.ಏರಿಕೆ ಮಾಡಲಾಗಿದೆ. ಇದರಿಂದಾಗಿ ಒಂದು ಲೀಟರ್ ಪೆಟ್ರೋಲ್ ಬೆಲೆ 338 ರೂ.ಗೆ ಏರಿಕೆ ಮಾಡಲಾಗಿದೆ. ಹೀಗಾಗಿ ನಿನ್ನೆ ಪ್ರತಿಭಟನಾಕಾರರು ರಂಬುಕ್ಕನದಲ್ಲಿ ರೈಲು ಮಾರ್ಗದ ಬಳಿ ಪ್ರತಿಭಟನೆ ನಡೆಸಿದ್ದರು.

ಭದ್ರತಾ ಸಿಬ್ಬಂದಿ ರೈಲು ಮಾರ್ಗವನ್ನು ತೆರವುಗೊಳಿಸುವಂತೆ ಕೇಳಿದಾಗ, ಭದ್ರತಾ ಸಿಬ್ಬಂದಿಯ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಈ ವೇಳೆ ಪರಿಸ್ಥಿತಿಯನ್ನು ಹತೋಟಿಗೆ ತರಲು ಸಾಧ್ಯವಾಗದೇ ಪೊಲೀಸರು ಪ್ರತಿಭಟನಾಕಾರರ ಮೇಲೆ ಗುಂಡು ಹಾರಿಸಿದ್ದಾರೆ. ಈ ವೇಳೆ ಗುಂಡು ತಗುಲಿ ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದು, 12 ಮಂದಿ ಗಾಯಗೊಂಡಿದ್ದಾರೆ. 12 ಜನರ ಪೈಕಿ ನಾಲ್ವರ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.