ಭೀಕರ ರಸ್ತೆ ಅಪಘಾತ ; ಆರು ಮಂದಿ ಸಾವು…

67
firstsuddi

ಮೈಸೂರು : ಜಿಲ್ಲೆಯ ಹುಣಸೂರು ತಾಲೂಕಿನ ಕಲ್​ಬೆಟ್ಟ ರಸ್ತೆಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಬೊಲೆರೋ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದ್ದು 6 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರು ಗಾಯಗೊಂಡಿದ್ದಾರೆ. ಅವರನ್ನು ಹುಣಸೂರು ತಾಲೂಕು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಅನಿಲ್, ಸಂತೋಷ್, ರಾಜೇಶ್, ವಿನುತ್, ದಯಾನಂದ್, ಬಾಬು ಮೃತ ದುರ್ದೈವಿಗಳು. ಮೃತರೆಲ್ಲರೂ ಕೊಡಗು ಜಿಲ್ಲೆಯವರೆಂದು ತಿಳಿದು ಬಂದಿದೆ. ಮದುವೆ ಮುಗಿಸಿಕೊಂಡು ಹುಣಸೂರಿನಿಂದ ಊರಿನತ್ತ ತೆರಳುತ್ತಿದ್ದಾಗ ದುರಂತ ಸಂಭವಿಸಿದೆ. ಸ್ಥಳಕ್ಕೆ ಹುಣಸೂರು ಪೊಲೀಸರು ದೌಡಾಯಿಸಿದ್ದಾರೆ.