ಪಿಎಸ್‍ಐ ನೇಮಕಾತಿ ಅಕ್ರಮ – ದಿವ್ಯಾ ಹಾಗರಗಿ ಅಜ್ಞಾತಸ್ಥಳದಿಂದಲೇ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ…

88
firstsuddi

ಕಲಬುರಗಿ : ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಪೊಲೀಸರು ತನಿಖೆ ಚುರುಕುಗೊಳಿಸುತ್ತಿದ್ದಂತೆ ತಲೆ ಮರೆಸಿಕೊಂಡಿರುವ ದಿವ್ಯಾ ಹಾಗರಗಿ ಒಂದು ವಾರವಾದರೂ ವಿಚಾರಣೆಗೆ ಹಾಜರಾಗಿಲ್ಲ. ಸದ್ಯ ಸಿಐಡಿ ಪೊಲೀಸರ ಬಂಧನದ ಭೀತಿಯಿಂದಾಗಿ ಅಜ್ಞಾತ ಸ್ಥಳದಿಂದಲೇ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ.

ವಕೀಲರ ಮೂಲಕ ಕಲಬುರಗಿ ಜೆಎಂಎಫ್ಸಿ ನ್ಯಾಯಾಲಯಕ್ಕೆ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಕೆಯಾಗಿದೆ. ದಿವ್ಯಾ ಹಾಗರಗಿ ಅಲ್ಲದೆ ಶಾಲೆಯ ಮುಖ್ಯೋಪಾಧ್ಯಾಯ ಕಾಶಿನಾಥ್, ಸಹ ಶಿಕ್ಷಕಿ ಅಶ್ವಿನಿ ಕೂಡಾ ಅಜ್ಞಾತ ಸ್ಥಳದಿಂದಲೇ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.