ಪಿಎಸ್ಐ ನೇಮಕಾತಿ ಅಕ್ರಮದಲ್ಲಿ ತಪ್ಪಿತಸ್ಥರು ಯಾರೇ ಆದ್ರೂ ಬಿಡುವುದಿಲ್ಲ : ಬೊಮ್ಮಾಯಿ.

63
firstsuddi

ಕಲಬುರಗಿ : ಪಿಎಸ್ಐ ನೇಮಕಾತಿ ಅಕ್ರಮದ ಬಗ್ಗೆ ಪಾರದರ್ಶಕ ತನಿಖೆ ನಡೆಯುತ್ತಿದ್ದು, ತಪ್ಪಿತಸ್ಥರು ಯಾರೇ ಆದ್ರೂ ಬಿಡುವುದಿಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ.

ಎರಡು ದಿನಗಳ ಪ್ರವಾಸಕ್ಕೆ ಇಂದು ಕಲುಬುರಗಿಗೆ ಆಗಮಿಸಿದ ಸಿಎಂ, ನಗರದ ಡಿ.ಎ.ಆರ್ ಪರೇಡ್ ಮೈದಾನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಉತ್ತರ ಪತ್ರಿಕೆಯಲ್ಲಿ ವ್ಯತ್ಯಾಸ ಗೊತ್ತಾದ ತಕ್ಷಣವೇ ಸಮಗ್ರ ತನಿಖೆ ನಡೆಸುವಂತೆ ಸಿಐಡಿಗೆ ಸೂಚಿಸಿದ್ದೇನೆ. ಕಲಬುರಗಿಯ ಕೆಲವು ಶಿಕ್ಷಣ ಸಂಸ್ಥೆಗಳು ಹಾಗೂ ಮಾಲೀಕರ ಮೇಲೆ ಈಗಾಗಲೇ ಕಾರ್ಯಾಚರಣೆ ಮೂಲಕ ಶೋಧ ನಡೆಸಲಾಗಿದೆ. ಪ್ರಕರಣದಲ್ಲಿ ಭಾಗಿಯಾದವರು ಯಾರೇ ಆಗಲಿ ರಕ್ಷಣೆ ಮಾಡುವ ಪ್ರಶ್ನೆ ಇಲ್ಲ ಎಂದರು.

ಸದ್ಯ ದಿವ್ಯಾ ಹಾಗರಗಿ ಅವರಿಗೆ ನಮ್ಮ ಪಕ್ಷದಲ್ಲಿ ಯಾವುದೇ ಜವಾಬ್ದಾರಿ ಇಲ್ಲ. ಆದಾಗಿಯೂ ತಪ್ಪಿತಸ್ಥರು ಯಾರೇ ಇರಲಿ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಅಫಜಲಪುರ ಕಾಂಗ್ರೆಸ್ ಶಾಸಕ ಎಂ.ವೈ. ಪಾಟೀಲ್ ಅವರ ಗನ್ ಮ್ಯಾನ್ ಅಯ್ಯಣ್ಣಾ ದೇಸಾಯಿ, ಸಹಾಯ ಮಾಡಿದ ಸಿಆರ್‌ಪಿ ಪೇದೆ ರುದ್ರಗೌಡ ಬಂಧನ ಮಾಡಲಾಗಿದೆ. ಸಿಐಡಿಗೆ ಫ್ರೀ ಹ್ಯಾಂಡ್ ಕೊಡಲಾಗಿದ್ದು, ಮತ್ತಷ್ಟು ಆಳವಾಗಿ ಶೋಧಕ್ಕೆ ಸೂಚಿಸಿದ್ದೇನೆ ಎಂದು ಸಿಎಂ ಹೇಳಿದರು.