ಮೇವು ಹಗರಣ ಕೇಸ್ – ಲಾಲೂ ಪ್ರಸಾದ್ ಯಾದವ್‍ಗೆ ಜಾಮೀನು ಮಂಜೂರು…

56
firstsuddi

ರಾಂಚಿ : ಮೇವು ಹಗರಣಕ್ಕೆ ಸಂಬಂಧಿಸಿದಂತೆ ಆರ್‌ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಅವರಿಗೆ ಜಾರ್ಖಂಡ್ ಹೈಕೋರ್ಟ್ ಇಂದು ಜಾಮೀನು ನೀಡಿದೆ.

ಪ್ರಕರಣದ ವಿಚಾರಣೆ ನಡೆಸಿದ್ದ ಸಿಬಿಐ ವಿಶೇಷ ನ್ಯಾಯಾಲಯ ಯಾದವ್ ಅವರನ್ನು ಮೇವು ಹಗರಣದ ಐದನೇ ಪ್ರಕರಣವಾದ 139.5 ಕೋಟಿ ರೂಪಾಯಿಗಳ ಡೊರಾಂಡಾ ಖಜಾನೆ ಅವ್ಯವಹಾರ ಪ್ರಕರಣದಲ್ಲಿ ದೋಷಿ ಎಂದು ಪರಿಗಣಿಸಿ, 5 ವರ್ಷ ಜೈಲು ಶಿಕ್ಷೆ, ದಂಡ ವಿಧಿಸಿತ್ತು. ಆದರೆ ಅವರ ಆರೋಗ್ಯ ಸ್ಥಿತಿ ಸರಿಯಿಲ್ಲದ ಕಾರಣ ಜಾರ್ಖಂಡ್ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಫೆಬ್ರವರಿಯಲ್ಲಿ ಸಿಬಿಐ ನ್ಯಾಯಾಲಯ ಅವರನ್ನು ಬಂಧಿಸಿತ್ತು.

ಇದೇ ಮೇವು ಹಗರಣದ ದುಮ್ಕಾ, ದಿಯೋಘರ್ ಮತ್ತು ಚೈಬಾಸಾ ಖಜಾನೆಗಳಿಂದ ಹಣ ಪಡೆದುಕೊಂಡ ನಾಲ್ಕು ಪ್ರಕರಣಗಳಲ್ಲಿ ಲಾಲೂ ಅವರು ಜಾಮೀನು ಪಡೆದಿದ್ದಾರೆ.