ದೇವಾಲಯಗಳಲ್ಲಿ ಸುಪ್ರಭಾತ ಸೇವೆಗೆ ಅವಕಾಶ ಕೊಡಿ : ಹಿಂದೂ ಮುಖಂಡರ ಬೇಡಿಕೆ…

51
firstsuddi

ಬೆಂಗಳೂರು : ರಾಜ್ಯದಲ್ಲಿ ಹಿಜಾಬ್, ಹಲಾಲ್, ಆಜಾನ್ ಹೀಗೆ ಅನೇಕ ವಿಷಯಗಳಲ್ಲಿ ವಿವಾದ ನಡೆಯುತ್ತಿದೆ. ಇದೆಲ್ಲದರ ಮಧ್ಯೆ ಇದೀಗ ಹಿಂದೂ ಮುಖಂಡರು ಹಿಂದೂ ದೇವಾಲಯಗಳಲ್ಲಿ ಸುಪ್ರಭಾತ ಸೇವೆಗೆ ಅವಕಾಶ ಕೊಡಿ ಎಂದು ಬೇಡಿಕೆ ಇಟ್ಟಿದ್ದಾರೆ. ಹಿಂದೂ ಮುಖಂಡ, ಧಾರ್ಮಿಕ ಪರಿಷತ್ ಸದಸ್ಯ ಹರ್ಷ ಮುತಾಲಿಕ್ ಧಾರ್ಮಿಕ ದತ್ತಿಗೆ ಮನವಿ ಸಲ್ಲಿಸಿ ಪ್ರತಿದಿನ ಬೆಳಗ್ಗೆ ಸುಪ್ರಭಾತ ಸೇವೆಗೆ ಅನುಮತಿ ನೀಡಿ ಎಂದಿದ್ದಾರೆ.

ರಾಜ್ಯದ ಎಲ್ಲಾ ಧಾರ್ಮಿಕ ದತ್ತಿ ಇಲಾಖೆಗೆ ಒಳಪಡುವ ದೇವಸ್ಥಾನಗಳಿಗೆ ಪ್ರತಿದಿನ ಬೆಳಗ್ಗೆ ಸುಪ್ರಭಾತ ಹಾಕಲು ಹಾಗೂ ವಿಶೇಷ ದಿನಗಳಲ್ಲಿ ಪೂಜೆ ಮತ್ತು ಕೈಕರ್ಯಗಳನ್ನು ಪಠಿಸಲು ಮೈಕ್ ನ ಅಗತ್ಯವಿದೆ. ಹೀಗಾಗಿ ಲೌಡ್ ಸ್ಪೀಕರ್, ಸೌಂಡ್ ಸಿಸ್ಟಂ, ಮೈಕ್ ಅಳವಡಿಕೆಗೆ ಅವಕಾಶ ನೀಡಬೇಕು ಎಂದು ಮನವಿ ಸಲ್ಲಿಸಲಾಗಿದೆ.