ಇಂದು ರಾತ್ರಿ ನಮ್ಮ ಮೆಟ್ರೋ ಸಂಚಾರ ಸ್ಥಗಿತ…

73
firstsuddi

ಬೆಂಗಳೂರು : ಇಂದು ರಾತ್ರಿ ನಮ್ಮ ಮೆಟ್ರೋ ಸಂಚಾರ ಸ್ಥಗಿತಗೊಳ್ಳಲಿದೆ. ಇಂದಿರಾನಗರ ಹಾಗೂ ಸ್ವಾಮಿ ವಿವೇಕಾನಂದ ಮಾರ್ಗದ ನಡುವೆ ಸಿವಿಲ್ ಕಾಮಗಾರಿ ಹಿನ್ನೆಲೆ ಎಂ.ಜಿ ರಸ್ತೆಯಿಂದ ಬೈಯಪ್ಪನಹಳ್ಳಿವರೆಗೆ ಮೆಟ್ರೋ ಸಂಚಾರ ಸ್ಥಗಿತಗೊಳ್ಳಲಿದೆ ಎಂದು ಬಿಎಂಆರ್ ಸಿಎಲ್ ಪ್ರಕಟಣೆ ಹೊರಡಿಸಿದೆ.

ಬೆಂಗಳೂರು ಮೆಟ್ರೋ ರೈಲು ನಿಗಮವು ಏಪ್ರಿಲ್ 23 ರಂದು ರಾತ್ರಿ 9.30 ಗಂಟೆಗೆ ಇಂದಿರಾನಗರ ಮತ್ತು ಸ್ವಾಮಿ ವಿವೇಕಾನಂದ ವಿವೇಕಾನಂದ ಮೆಟ್ರೋ ನಿಲ್ದಾಣಗಳ ನಡುವೆ ನೇರಳೆ ಮಾರ್ಗದಲ್ಲಿ ಸಿವಿಲ್ ನಿರ್ವಹಣೆ ಕಾಮಗಾರಿಯನ್ನು ಕೈಗೊಳ್ಳುತ್ತಿದೆ. ಈ ಕಾಮಗಾರಿ ನಿರ್ವಹಿಸಲು ನೇರಳೆ ಮಾರ್ಗದ ಎಂ.ಜಿ ರಸ್ತೆ ಮೆಟ್ರೋ ನಿಲ್ದಾಣದಿಂದ ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣದವರೆಗೆ ವಾಣಿಜ್ಯ ಸೇವೆಯನ್ನು  ರಾತ್ರಿ 9.30 ಗಂಟೆಯಿಂದ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುತ್ತೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಈ ಅವಧಿಯಲ್ಲಿ ಮೆಟ್ರೋ ವೇಳಾಪಟ್ಟಿಯ ಪ್ರಕಾರ ಪ್ರಯಾಣಿಕರಿಗೆ ಮೆಟ್ರೋ ಸೇವೆಯೂ ಎಂ.ಜಿ ರಸ್ತೆ ಹಾಗೂ ಕೆಂಗೇರಿ ಮೆಟ್ರೋ ನಿಲ್ದಾಣಗಳ ನಡುವೆ ಮಾತ್ರ ಲಭ್ಯವಿರುತ್ತದೆ. ಭಾನುವಾರದಂದು ಮೆಟ್ರೋ ಸೇವೆಯು ನೇರಳೆ ಮಾರ್ಗದಲ್ಲಿ ಬೆಳಗ್ಗೆ 7.00 ಗಂಟೆಯಿಂದ ವೇಳಾಪಟ್ಟಿಯ ಪ್ರಕಾರ ಪುನರಾಂಭಿಸಲಾಗುತ್ತದೆ. ಹಸಿರು ಮಾರ್ಗದ ಮೆಟ್ರೋ ರೈಲು ಸೇವೆಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಮತ್ತು ವೇಳಾಪಟ್ಟಿಯ ಪ್ರಕಾರ ರೈಲು ಸೇವೆಯು ಈ ಮಾರ್ಗದಲ್ಲಿ ಲಭ್ಯವಿರುತ್ತದೆ.