ನಾಳೆ ಜಮ್ಮು-ಕಾಶ್ಮೀರಕ್ಕೆ ಪ್ರಧಾನಿ ಮೋದಿ ಭೇಟಿ…

61
firstsuddi

ಜಮ್ಮು ಮತ್ತು ಕಾಶ್ಮೀರ : ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಲಿದ್ದಾರೆ. ಈ ಹಿನ್ನೆಲೆ ಜಮ್ಮು ಮತ್ತು ಕಾಶ್ಮೀರದಲ್ಲಿ ಕಟ್ಟೆಚ್ಚರ ವಹಿಸುವಂತೆ ಭದ್ರತಾ ಪಡೆಗಳಿಗೆ ಸೂಚನೆ ನೀಡಲಾಗಿದೆ.

ರಾಷ್ಟ್ರೀಯ ಪಂಚಾಯತ್ ರಾಜ್ ದಿನದಂದು(ಏಪ್ರಿಲ್ 24) ಮೋದಿ ಜಮ್ಮುವಿನಿಂದ 17 ಕಿ.ಮೀ ದೂರದಲ್ಲಿರುವ ಪಾಲಿ ಗ್ರಾಮಕ್ಕೆ ಭೇಟಿ ನೀಡಲಿದ್ದಾರೆ ಹಾಗೂ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ ಎಂದು ವರದಿಗಳು ತಿಳಿಸಿವೆ.

ಜಮ್ಮು ಮತ್ತು ಕಾಶ್ಮೀರಕ್ಕೆ ಪ್ರಧಾನಿ ಮೋದಿ ಭೇಟಿ ನೀಡುವ ಎರಡು ದಿನಗಳ ಮೊದಲೇ ಜಮ್ಮುವಿನ ಸುಂಜ್ವಾನ್ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವಿನ ಘರ್ಷಣೆಯಲ್ಲಿ ಮೂವರು ಉಗ್ರರು ಹತರಾಗಿದ್ದಾರೆ. ಓರ್ವ ಭದ್ರತಾ ಪಡೆಯ ಯೋಧ ಹುತಾತ್ಮರಾಗಿದ್ದು, ಇತರ ನಾಲ್ವರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.