ಪ್ರಿಯಾಂಕ್ ಖರ್ಗೆ ಬಿಡುಗಡೆ ಮಾಡಿರುವ ಆಡಿಯೋ ಬಗ್ಗೆ ತನಿಖೆ ನಡೆಸುತ್ತೇವೆ : ಸಿಎಂ.

55
firstsuddi

ಬೆಂಗಳೂರು : ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮ ಪ್ರಕರಣ ಸಂಬಂಧ ಶಾಸಕ ಪ್ರಿಯಾಂಕ್ ಖರ್ಗೆ ಅವರು ಬಿಡುಗಡೆ ಮಾಡಿರುವ ಆಡಿಯೋ ಬಗ್ಗೆ ತನಿಖೆ ನಡೆಸುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಆರ್​ಟಿ ನಗರದ ತಮ್ಮ ನಿವಾಸದಲ್ಲಿ ಮಾತನಾಡಿದ ಅವರು, ಆ ಆಡಿಯೋದಲ್ಲಿ ಯಾರು ಮಾತನಾಡಿರುವುದು, ಆ ಇಬ್ಬರ ಅರ್ಹತೆ ಏನು? ಎಲ್ಲದರ ಬಗ್ಗೆಯೂ ತನಿಖೆಯಾಗುತ್ತದೆ. ಆಡಿಯೋವನ್ನು ತನಿಖೆಗೆ ಒಳಪಡಿಸುತ್ತೇವೆ. ಇದರ ಹಿಂದೆ ಯಾರೇ ಇದ್ದರೂ ಬಿಡುವುದಿಲ್ಲ. ಯಾವುದೇ ಬ್ಯಾಚ್ ಆಗಿದ್ದರೂ ತನಿಖೆ ಮಾಡಲಾಗುತ್ತದೆ ಎಂದು ಸಿಎಂ ಸ್ಪಷ್ಟಪಡಿಸಿದರು.

ಶಾಲೆಯಲ್ಲಿ ಬಾಂಬ್ ಇಟ್ಟ ಬಗ್ಗೆ ಪಾಕಿಸ್ತಾನ, ಸಿರಿಯಾದಿಂದ ಮಾಹಿತಿ ಬಂದ ವಿಚಾರವಾಗಿ ಪ್ರತಿಕ್ರಿಯಿಸಿದ ಸಿಎಂ, ಈ ಬಗ್ಗೆ ನನಗೆ ಮಾಹಿತಿ ಇಲ್ಲ. ಕಮಿಷನರ್ ಜೊತೆ ಚರ್ಚೆ ಮಾಡಿ ಮಾಹಿತಿ ಪಡೆಯುತ್ತೇನೆ ಎಂದರು.