ಎರಡನೇ ಬಾರಿಗೆ ಫ್ರಾನ್ಸ್ ಅಧ್ಯಕ್ಷರಾದ ಎಮ್ಯಾನುಯೆಲ್ ಮ್ಯಾಕ್ರನ್.. ಪ್ರಧಾನಿ ಮೋದಿ ಅಭಿನಂದನೆ…

70
firstsuddi

ಫ್ರಾನ್ಸ್ : ಫ್ರಾನ್ಸ್ ನ ಹಾಲಿ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರು ಸತತ ಎರಡನೇ ಬಾರಿಗೆ ಫ್ರಾನ್ಸ್ ಅಧ್ಯಕ್ಷರಾಗಿ ಗೆಲುವು ಸಾಧಿಸಿದ್ದಾರೆ.  ಫ್ರಾನ್ಸ್ ನ ಅಧ್ಯಕ್ಷೀಯ ಚುನಾವಣೆಯಲ್ಲಿ ಎಮ್ಯಾನುಯೆಲ್ ಮ್ಯಾಕ್ರನ್ ಅವರು ಶೇ.58.2ರಷ್ಟು ಮತಗಳನ್ನು ಪಡೆಯುವ ಮೂಲಕ ಬಲಪಂಥೀಯ ಪ್ರತಿಸ್ಪರ್ಧಿ ಮರೀನ್ ಲೆ ಪೆನ್ ಅವರನ್ನು ಸೋಲಿಸಿ ಎರಡನೇ ಬಾರಿಗೆ ಜಯಗಳಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ ಅವರು, ಫ್ರಾನ್ಸ್ ಅಧ್ಯಕ್ಷರಾಗಿ ಮರು ಆಯ್ಕೆಯಾದ ನನ್ನ ಸ್ನೇಹಿತ ಇಮ್ಯಾನುಯೆಲ್ ಮ್ಯಾಕ್ರನ್ ಅವರಿಗೆ ಅಭಿನಂದನೆಗಳು. ಭಾರತ-ಫ್ರಾನ್ಸ್ ಕಾರ್ಯತಂತ್ರದ ಸಹಭಾಗಿತ್ವವನ್ನು ಗಾಢಗೊಳಿಸಲು ಒಟ್ಟಾಗಿ ಕೆಲಸ ಮಾಡಲು ನಾನು ಎದುರು ನೋಡುತ್ತಿದ್ದೇನೆ ಎಂದಿದ್ದಾರೆ.