ಚೆನ್ನೈ : ರಥೋತ್ಸವದ ವೇಳೆ ರಥಕ್ಕೆ ಹೈವೋಲ್ಟೇಜ್ ವಿದ್ಯುತ್ ತಂತಿ ತಗುಲಿ 11 ಮಂದಿ ಸಾವನ್ನಪ್ಪಿದ ಘಟನೆ ತಮಿಳುನಾಡಿನ ತಾಂಜಾವೂರು ಜಿಲ್ಲೆಯ ಕಾಳಿಮೇಡು ಗ್ರಾಮದಲ್ಲಿ ಇಂದು ಬೆಳಗ್ಗೆ ನಡೆದಿದೆ.
ಇಂದು ಮುಂಜಾನೆ ಕಾಳಿಮೇಡು ಗ್ರಾಮದ ಅಪ್ಪರ್ ದೇವಸ್ಥಾನದಲ್ಲಿ ರಥೋತ್ಸವ ನಡೆಯುತ್ತಿತ್ತು. ಈ ವೇಳೆ ಪಲ್ಲಕ್ಕಿಗೆ ವಿದ್ಯುತ್ ಲೈನ್ ತಗುಲಿದೆ. ಇದರಿಂದಾಗಿ ರಥ ಎಳೆಯುತ್ತಿದ್ದ ಜನರಿಗೆ ವಿದ್ಯುತ್ ಹರಿದಿದೆ. ಪರಿಣಾಮ ಇಬ್ಬರು ಮಕ್ಕಳು ಸೇರಿದಂತೆ 11 ಜನ ಸಾವನ್ನಪ್ಪಿದ್ದು, 15 ಮಂದಿಗೆ ಗಂಭೀರ ಗಾಯಗಳಾಗಿವೆ. ಗಾಯಗೊಂಡವರನ್ನು ಹೆಚ್ಚಿನ ಚಿಕಿತ್ಸೆಗಾಗಿ ತಂಜಾವೂರು ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
ಸಂತ್ರಸ್ತರ ಕುಟುಂಬಗಳಿಗೆ ಸಾಂತ್ವನ ಹೇಳಲು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಮತ್ತು ಸಚಿವ ಅನ್ಬಿಲ್ ಮಹೇಶ್ ತಂಜಾವೂರಿಗೆ ತೆರಳಲಿದ್ದಾರೆ. ತಮಿಳುನಾಡು ಸರ್ಕಾರ ಸಂತ್ರಸ್ತರ ಕುಟುಂಬಗಳಿಗೆ 5 ಲಕ್ಷ ರೂಪಾಯಿ ಪರಿಹಾರ ಧನವನ್ನು ಘೋಷಿಸಿದೆ. ಕಾಳಿಮೇಡುವಿನ ಅಪ್ಪರ್ ದೇವಸ್ಥಾನದಲ್ಲಿ ಪ್ರತಿವರ್ಷದಂತೆ ಈ ವರ್ಷವೂ ‘ಸಥಾಯ ಹಬ್ಬ’ವನ್ನು ಆಚರಿಸಲಾಗುತ್ತಿತ್ತು.










