ನಟ ವಿಜಯ್ ಬಾಬು ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ – ಪ್ರಕರಣ ದಾಖಲು…

133
firstsuddi

ತಿರುವನಂತಪುರಂ : ಮಲಯಾಳಂನ ನಟ ಮತ್ತು ನಿರ್ಮಾಪಕ ವಿಜಯ್ ಬಾಬು ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪದಡಿ ಪ್ರಕರಣ ದಾಖಲಾಗಿದೆ.

ಏಪ್ರಿಲ್ 22 ರಂದು ಯುವತಿ ನೀಡಿರುವ ದೂರಿನ ಮೇರೆಗೆ ಎರ್ನಾಕುಲಂ ಸೌತ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಯುವತಿ ಕೋಝಿಕೋಡ್ ನಿವಾಸಿಯಾಗಿದ್ದು, ಸಿನಿಮಾದಲ್ಲಿ ಅವಕಾಶ ಕೊಡಿಸುವುದಾಗಿ ನಂಬಿಸಿ ಕೊಚ್ಚಿಯ ಎರ್ನಾಕುಲಂ ಫ್ಲ್ಯಾಟ್ ನಲ್ಲಿ ವಿಜಯ್ ಬಾಬು ಹಲವು ಬಾರಿ ಅತ್ಯಾಚಾರ ಎಸಗಿದ್ದಾರೆ ಎಂದು ಯುವತಿ ಆರೋಪಿಸಿದ್ದಾಳೆ.

ಅಲ್ಲದೇ ವಿಜಯ್ ಬಾಬು ವಿರುದ್ಧ ಅತ್ಯಾಚಾರ ಹಾಗೂ ದೈಹಿಕ ಹಲ್ಲೆ ನಡೆಸಿರುವುದಾಗಿ ದೂರು ನೀಡಿದ್ದರೂ, ಇದುವರೆಗೂ ಪೊಲೀಸರು ವಿಜಯ್ ಬಾಬುವನ್ನು ಕರೆಸಿ ವಿಚಾರಣೆ ನಡೆಸಿಲ್ಲ. ಬದಲಾಗಿ ಪ್ರಕರಣವನ್ನು ಮುಚ್ಚಿಹಾಕುವ ಯತ್ನ ಮಾಡಿದ್ದಾರೆ ಎಂದು ಆರೋಪಿಸಿದ್ದಾಳೆ.

1983ರಲ್ಲಿ ಬಾಲ ನಟನಾಗಿ ಮಲೆಯಾಳಂ ಸಿನಿಮಾಗೆ ಎಂಟ್ರಿಕೊಟ್ಟ ವಿಜಯ್ ಬಾಬು ಸದ್ಯ ಬಾರಿ ಬೇಡಿಕೆಯ ನಟನಾಗಿ ಹೊರಹೊಮ್ಮಿದ್ದಾರೆ.